ಶ್ರೀನಗರ (ಜಮ್ಮು ಕಾಶ್ಮೀರ): ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಕ್ರೆರಿ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು. ದಾಳಿ ನಡೆದ ಎರಡು ದಿನಗಳ ನಂತರ ಉಗ್ರರು ಸಾಮಾಜಿಕ ಜಾಲತಾಣದಲ್ಲಿ ಹಲ್ಲೆಯ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಇಂದು ವಿಡಿಯೋ ಬಿಡುಗಡೆ ಮಾಡಿರುವ ಉಗ್ರರು, ಭದ್ರತಾ ಪಡೆಗಳ ಮೇಲೆ ಉದ್ದೇಶ ಪೂರ್ವಕವಾಗಿಯೇ ಗುಂಡು ಹಾರಿಸಿರುವುದನ್ನು ಕಾಣಬಹುದು.
ಇನ್ನು ಉಗ್ರರು ಈ ವಿಡಿಯೋ ಮೂಲಕ ಉಗ್ರರ ರಾಕ್ಷಸಿ ಕೃತ್ಯವನ್ನ ಜಗಜ್ಜಾಹೀರು ಮಾಡಿ, ಭೀತಿ ಸೃಷ್ಟಿಸುವ ಹುನ್ನಾರ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.