ನವದೆಹಲಿ : ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ನೂತನ ಕೃಷಿ ಕಾನೂನುಗಳ ಬಗ್ಗೆ ಅರಿವಿಲ್ಲ. ಆದ್ದರಿಂದ ಅವರು ಸಾರ್ವಜನಿಕರಿಗೆ ತಪ್ಪು ಮಾಹಿತಿ ರವಾನಿಸುತ್ತಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಆರೋಪಿಸಿದ್ದಾರೆ.
ಸರ್ಕಾರದ ಹೊಸ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡ ತೋಮರ್, ಈ ಕಾನೂನುಗಳ ಮೂಲಕ ರೈತರು ತಾವು ಬೆಳೆದ ಬೆಳೆಗಳನ್ನು ಎಲ್ಲಿಯಾದ್ರೂ, ಯಾರಿಗಾದ್ರೂ ಮಾರಬಹುದು. ಇದರಿಂದಾಗಿ ರೈತರಿಗೆ ಅನುಕೂಲವಾಗುತ್ತದೆ ಎಂದಿದ್ದಾರೆ.
ಶರದ್ ಪವಾರ್ ಒಬ್ಬ ಹಿರಿಯ ರಾಜಕಾರಣಿ ಮತ್ತು ಕೇಂದ್ರದ ಮಾಜಿ ಕೃಷಿ ಸಚಿವರಾಗಿದ್ದು, ಕೃಷಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಪರಿಹಾರಗಳ ಬಗ್ಗೆ ತಿಳಿದಿದ್ದಾರೆ. ಇದೇ ಕೃಷಿ ಸುಧಾರಣೆಗಳನ್ನು ಜಾರಿಗೊಳಿಸಲೂ ಅವರು ಯತ್ನಿಸಿದ್ದರು ಎಂದು ತೋಮರ್ ಸರಣಿ ಟ್ವೀಟ್ ಮೂಲಕ ಶರದ್ ಪವಾರ್ ವಿರುದ್ಧ ಹರಿಹಾಯ್ದಿದ್ದಾರೆ.
-
Sharad Pawar ji is a veteran politician and a former Union Agriculture Minister, who is also considered well-versed with the issues & solutions relating to Agriculture. He has himself tried hard to bring the same agriculture reforms earlier.
— Narendra Singh Tomar (@nstomar) January 31, 2021 " class="align-text-top noRightClick twitterSection" data="
">Sharad Pawar ji is a veteran politician and a former Union Agriculture Minister, who is also considered well-versed with the issues & solutions relating to Agriculture. He has himself tried hard to bring the same agriculture reforms earlier.
— Narendra Singh Tomar (@nstomar) January 31, 2021Sharad Pawar ji is a veteran politician and a former Union Agriculture Minister, who is also considered well-versed with the issues & solutions relating to Agriculture. He has himself tried hard to bring the same agriculture reforms earlier.
— Narendra Singh Tomar (@nstomar) January 31, 2021
ಹೊಸ ಕಾನೂನಿನಡಿ ರೈತರಿಗೆ ಹೆಚ್ಚು ಅವಕಾಶಗಳು ತೆರೆದುಕೊಳ್ಳುತ್ತವೆ. ಆದರೆ, ಈ ಬಗ್ಗೆ ತಪ್ಪು ಮಾಹಿತಿ ರವಾನಿಸುತ್ತಿರೋದು ಮಾತ್ರ ಸರಿಯಲ್ಲ ಎಂದು ತೋಮರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನವರಿ 30 (ಶನಿವಾರ)ರಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್, ಕೇಂದ್ರ ಜಾರಿಗೊಳಿಸಿರುವ ಕೃಷಿ ಕಾನೂನುಗಳು ಎಂಎಸ್ಪಿ ಮೇಲೆ ಪರಿಣಾಮ ಬೀರಲಿದ್ದು, ಮಂಡಿ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ ಎಂದಿದ್ದರು.
ನನ್ನ ಅಧಿಕಾರಾವಧಿಯಲ್ಲಿ ವಿಶೇಷ ಮಾರುಕಟ್ಟೆಗಳನ್ನು ಸ್ಥಾಪಿಸಲು ಡ್ರಾಫ್ಟ್ ಎಪಿಎಂಸಿ ನಿಯಮ- 2007 ರೂಪಿಸಲಾಯಿತು. ಇದರಿಂದಾಗಿ ರೈತರು ಉತ್ಪನ್ನಗಳನ್ನು ಮಾರಲು ಪರ್ಯಾಯ ವೇದಿಕೆಗಳನ್ನು ಸೃಷ್ಟಿಸಲಾಯಿತು ಎಂದಿದ್ದರು. ನೂತನ ಕೃಷಿ ಕಾಯ್ದೆ ಹಿಂಪಡೆಯುವಂತೆ ಕಳೆದ 65 ದಿನಗಳಿಂದ ದೆಹಲಿ ಗಡಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.