ETV Bharat / bharat

ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡರ್ ಎನ್​​​ಕೌಂಟರ್​​​​​​: ಕಾಶ್ಮೀರದಲ್ಲಿ ಇಂಟರ್​​ನೆಟ್​​​ ಸ್ಥಗಿತ

ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್​ನನ್ನು ಎನ್​​ಕೌಂಟರ್​​ ಮೂಲಕ ಭಾರತೀಯ ಸೇನೆ ಹತ್ಯೆ ಮಾಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕಾಶ್ಮೀರದಲ್ಲಿ ಇಂಟರ್​​ನೆಟ್​​​​​​ ಸೇವೆಗಳನ್ನ ಸ್ಥಗಿತಗೊಳಿಸಲಾಗಿದೆ.

Mobile internet suspended in Kashmir
: ಕಾಶ್ಮೀರದಲ್ಲಿ ಇಂಟರ್ನೆಟ್​ ಸೇವೆ ಸ್ಥಗಿತ
author img

By

Published : May 6, 2020, 3:22 PM IST

Updated : May 6, 2020, 5:23 PM IST

ಶ್ರೀನಗರ (ಜಮ್ಮು& ಕಾಶ್ಮೀರ): ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಮಾಂಡರ್ ರಿಯಾಜ್ ನಾಯಕೂ ಮತ್ತು ಇನ್ನೋರ್ವ ಉಗ್ರನನ್ನು ಎನ್​ಕೌಂಟರ್​ ಮಾಡಲಾಗಿದೆ. ಈ ಹಿನ್ನೆಲೆ, ಕಾಶ್ಮೀರದಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಇಂದು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಗುಂಡಿನ ಚಕಮಕಿಯಿಂದಾಗಿ ಹಾಗೂ ಯಾವುದೇ ಅಹಿತಕರ ಘಟೆನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಬೀಗ್ಪೊರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದರಿಂದ ಸದ್ಯ ವಾತಾವರಣ ತಿಳಿಗೊಂಡಿಲ್ಲ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ.

Last Updated : May 6, 2020, 5:23 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.