ETV Bharat / bharat

ಕಾಶ್ಮೀರ ಕಣಿವೆಯಲ್ಲಿ ಮೊಬೈಲ್​ ಸೇವೆ ಪುನಾರಂಭ: ಇಂಟರ್​ನೆಟ್​ ಸೌಲಭ್ಯಕ್ಕೆ ಸಿಕ್ಕಿಲ್ಲ ಗ್ರೀನ್​ ಸಿಗ್ನಲ್​​​ - ಹಿಜ್ಬುಲ್ ಮುಜಾಹಿದ್ದೀನ್​

ಬುಧವಾರ ಭಯೋತ್ಪಾದಕ ಸಂಘಟನೆಯ ಉನ್ನತ ಕಮಾಂಡರ್​ನನ್ನು ಭಾರತೀಯ ಸೇನೆ ಹತ್ಯೆ ಮಾಡಿತ್ತು. ಇದರ ಮುನ್ನೆಚ್ಚರಿಕೆ ಕ್ರಮವಾಗಿ ಮೊಬೈಲ್​ ಹಾಗೂ ಇಂಟರ್​ನೆಟ್​ ಸೇವೆ ನಿರ್ಬಂಧಿಸಲಾಗಿತ್ತು.

Mobile services
ಮೊಬೈಲ್​
author img

By

Published : May 9, 2020, 4:27 PM IST

ಶ್ರೀನಗರ (ಜಮ್ಮು-ಕಾಶ್ಮೀರ) : ಮೂರು ದಿನಗಳಿಂದ ಕಾಶ್ಮೀರದಲ್ಲಿ ಸ್ಥಗಿತಗೊಳಿಸಿದ್ದ ಮೊಬೈಲ್​​ ಸೇವೆಗಳನ್ನು ಶುಕ್ರವಾರದಿಂದ ಆರಂಭಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬುಧವಾರ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಗುಂಪಿನ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ಎನ್​​ಕೌಂಟರ್​​​​ನಲ್ಲಿ ಕಮಾಂಡರ್ ರಿಯಾಜ್ ನೈಕೂ ಮತ್ತು ಇನ್ನೊಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು. ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಮೊಬೈಲ್, ಇಂಟರ್ನೆಟ್ ಹಾಗೂ ಎಸ್​ಎಂಎಸ್​ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.

ಆದರೆ, ಕಳೆದ ಎರಡು ದಿನಗಳಿಂದ ಅಲ್ಲಿನ ಪರಿಸ್ಥಿತಿಯನ್ನ ಸೂಕ್ಷ್ಮವಾಗಿ ಗಮನಿಸಿದ ನಂತರ ಮೊಬೈಲ್​ ಸೇವೆ ಆರಂಭಿಸಲಾಗಿದೆ ಎಂದು ಜಮ್ಮು-ಕಾಶ್ಮೀರ ಗೃಹ ಇಲಾಖೆಯ ಅಧಿಕಾರಿಯೊಬ್ಬರು ಈಟಿವಿ ಭಾರತ್​ಕ್ಕೆ ತಿಳಿಸಿದ್ದಾರೆ.

ಸದ್ಯಕ್ಕೀಗ ಮೊಬೈಲ್​ ಸೇವೆಯನ್ನು ಮಾತ್ರ ನೀಡಲಾಗಿದ್ದು, ಮುಂದಿನ ಬೆಳವಣಿಗೆಗಳನ್ನು ಗಮನಿಸಿ ನಂತರ ಇಂಟರ್​ನೆಟ್​ ಹಾಗೂ ಎಸ್​ಎಂಎಸ್​ ಸೇವೆಗಳನ್ನು ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಬೀಗ್ಪೊರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿಯಲ್ಲಿ ರಿಯಾಜ್ ನೈಕೂ ಪ್ರಾಣಬಿಟ್ಟ ನಂತರ, ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಬಿಎಸ್​ಎನ್​ಎಲ್​ ಪೋಸ್ಟ್​ ಪೇಯ್ಡ್​ ಸೇವೆ ಹೊರತುಪಡಿಸಿ, ಉಳಿದೆಲ್ಲಾ ಮೊಬೈಲ್​ ಇಂಟರ್​ನೆಟ್​ ಹಾಗೂ ಮೊಬೈಲ್​ ಪೋನ್​ ಸೇವೆಯನ್ನು ಕಣಿವೆಯಾದ್ಯಂತ ನಿರ್ಬಂಧಿಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.