ಲಂಡನ್: ಲಂಡನ್ನಲ್ಲಿ ಆಯೋಜನೆಗೊಂಡಿರುವ ಇಂಡಿಯಾ ಗ್ಲೋಬಲ್ ವೀಕ್ 2020 ಕಾರ್ಯಕ್ರಮವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 1.30ಕ್ಕೆ ಮಾತನಾಡಿದ್ದಾರೆ.
ವಿಡಿಯೋ ಕಾನ್ಪರೆನ್ಸ್ ಮೂಲಕ ಸಮಾರಂಭದಲ್ಲಿ ನಮೋ ಭಾಗಿಯಾಗಿ ಮಾತನಾಡಲಿದ್ದು, ಭಾರತದಲ್ಲಿ ವ್ಯಾಪಾರ ಹಾಗೂ ವಿದೇಶಿ ಹೂಡಿಕೆ ಮಾಡಲು ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡುವ ಸಾಧ್ಯತೆ ಇದೆ. ಈ ಕಾರ್ಯಕ್ರಮದಲ್ಲಿ 30 ವಿವಿಧ ದೇಶಗಳ 5 ಸಾವಿರ ಪ್ರತಿನಿಧಿಗಳು ಭಾಗಿಯಾಗಲಿದ್ದು, ಮೂರು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದಲ್ಲಿ ಭಾರತದ ಪರ ಕೇಂದ್ರ ಸಚಿವರಾದ ಎಸ್ ಜೈಶಂಕರ್, ಪಿಯೂಷ್ ಗೋಯೆಲ್, ಹರ್ದೀಪ್ ಸಿಂಗ್ ಪುರಿ, ರವಿಶಂಕರ್ ಪ್ರಸಾದ್ ಮತ್ತು ಮಹೇಂದ್ರ ನಾಥ್ ಪಾಂಡೆ ಸಹ ಭಾಗಿಯಾಗಲಿದ್ದು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಲಂಡನ್ ಸರ್ಕಾರದ ಪರವಾಗಿ ಪ್ರಿನ್ಸ್ ಚಾರ್ಲ್ಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶೇಷ ಭಾಷಣ ಮಾಡಲಿದ್ದಾರೆ.