ನವದೆಹಲಿ: ಕೊರೊನಾ ಸೋಂಕು ಹರಡುವುದನ್ನು ತಡೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಲಿದ್ದಾರೆ.
ಪಂಜಾಬ್, ಕೇರಳ, ಗೋವಾ, ಉತ್ತರಾಖಂಡ ಸೇರಿದಂತೆ ಇನ್ನಿತರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು ಹಾಗೂ ಆಡಳಿತಾಧಿಕಾರಿಗಳ ಜತೆ ಮೋದಿ ಇಂದು ಮಧ್ಯಾಹ್ನ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
ನಾಳೆ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಪಶ್ಚಿಮ ಬಂಗಾಳ, ಗುಜರಾತ್, ಬಿಹಾರ, ಉತ್ತರ ಪ್ರದೇಶ ಸೇರಿದಂತೆ 15 ರಾಜ್ಯಗಳು ಮತ್ತು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚಿಸಲಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಸಿಎಂ ಮತ್ತು ಲೆಫ್ಟಿನೆಂಟ್ ಗವರ್ನರ್ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಮಾಹಿತಿ ಕಲೆ ಹಾಕಲಿದ್ದಾರೆ.