ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್ಎಸ್ಎಸ್) ಸಂಸ್ಥಾಪನಾ ದಿನವಾದ ವಿಜಯದಶಮಿಯಂದು ಗಣವೇಷಧಾರಿ ಸ್ವಯಂ ಸೇವಕರಿಂದ ಘೋಷ್ ಸಹಿತ ಪಥಸಂಚಲನ ನಡೆಯಿತು.
ಆರ್ಎಸ್ಎಸ್ ಗಣವೇಷಧಾರಿಗಳಿಂದ ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿ ರದ್ದುಗೊಳಿಸಿ ಕೇಂದ್ರ ಸರ್ಕಾರ ಜನರ ಪ್ರಶಂಸೆಗೆ ಪಾತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ದಿಟ್ಟ ನಿರ್ಧಾರ ಶ್ಲಾಘನೀಯ ಎಂದರು.
ಭಾರತ ಸದೃಢ ರಾಷ್ಟ್ರವಾಗಲು ಕೆಲವು ಪಟ್ಟಭದ್ರ ಹಿತಾಶಕ್ತಿಗಳು ಬಯಸುತ್ತಿಲ್ಲ. ಅಂತಹ ಶಕ್ತಿಗಳಿಂದ ಜಾಗೃತೆಯಿಂದರಿಬೇಕೆಂದು ಕರೆ ನೀಡಿದರು. ಗಡಿಗಳಲ್ಲಿ ಚೆಕ್ ಪೋಸ್ಟ್ಗಳ ಸಂಖ್ಯೆ ಹೆಚ್ಚಿಸಬೇಕು. ಕರವಾಳಿ ತೀರದಲ್ಲಿ ವಿಶೇಷ ಕಣ್ಗಾವಲು ಪಡೆ ಸಿದ್ಧಪಡಿಸಬೇಕೆಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹೆಚ್ಎಲ್ಸಿ ಸಂಸ್ಥಾಪಕ ಶಿವ ನಾಡರ್ ಭಾಗವಹಿಸಿದ್ದರು. ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ನಿವೃತ್ತ ಜನರಲ್ ವಿ ಕೆ ಸಿಂಗ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.