ನವದೆಹಲಿ: ಅಕ್ರಮ ಹಣ ವರ್ಗಾವಣೆ ಕೇಸ್ನಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನವಾಗಿ ಸದ್ಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಇಂದು ದೆಹಲಿ ಹೈಕೋರ್ಟ್ನಲ್ಲಿ ನಡೆಯಿತು.
ಡಿಕೆ ಶಿವಕುಮಾರ್ ಪರ ಮನು ಸಿಂಘ್ವಿ ವಾದ ಮಂಡನೆ ಮಾಡಿದರು. ಇದಾದ ಬಳಿಕ ವಿಚಾರಣೆಯಲ್ಲಿ ಅಕ್ಟೋಬರ್ 17ಕ್ಕೆ ಮುಂದೂಡಿಕೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ಈಗಾಗಲೇ ಇಡಿ ವಿಶೇಷ ನ್ಯಾಯಾಲಯ ಇನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದೆ. ಅ. 25ರವರೆಗೆ ಡಿಕೆಶಿ ಇಡಿ ವಶದಲ್ಲಿರಲಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ಗೌರಮ್ಮ ಹಾಗೂ ಪತ್ನಿ ಉಷಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ಸಮನ್ಸ್ ಜಾರಿ ಮಾಡಿದೆ.