ETV Bharat / bharat

2 ವರ್ಷದವರೆಗೆ ಸಾಲ ಮರುಪಾವತಿ ಅವಧಿ ವಿಸ್ತರಣೆ ಸಾಧ್ಯ: ಸುಪ್ರೀಂಗೆ ಕೇಂದ್ರದ ಮಾಹಿತಿ - ಲಾಕ್​ಡೌನ್​ ಅವಧಿ

ಸಾಲ ಮರುಪಾವತಿ ಅವಧಿ ಅಥವಾ ಕಂತುಗಳ ಮೇಲಿನ ಬಡ್ಡಿ ಪಾವತಿಸುವ ಅವಧಿಯನ್ನು ಎರಡು ವರ್ಷಗಳವರೆಗೆ ಮುಂದೂಡಿದರೆ ಕೋವಿಡ್​ ಪರಿಸ್ಥಿತಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವಾಗಲಿದೆ ಎಂದು ಸುಪ್ರೀಂ ಕೋರ್ಟ್​ಗೆ ಕೇಂದ್ರ ಸರ್ಕಾರ ತಿಳಿಸಿದೆ.

SC
ಸುಪ್ರೀಂ ಕೋರ್ಟ್​
author img

By

Published : Sep 1, 2020, 1:16 PM IST

ನವದೆಹಲಿ: ಸಾಲ ಮರುಪಾವತಿ ಅವಧಿಯನ್ನು ಮತ್ತೆರಡು ವರ್ಷಗಳ ಕಾಲ ವಿಸ್ತರಿಸಬಹುದು ಎಂದು ಕೇಂದ್ರ ಸರ್ಕಾರ ಹಾಗೂ ಭಾರತೀಯ ರಿಸರ್ವ್​ ಬ್ಯಾಂಕ್​​ (ಆರ್​ಬಿಐ) ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಿದೆ.

ಕೋವಿಡ್​ ಪರಿಸ್ಥಿತಿಯಿಂದಾಗಿ ಹಲವಾರು ಕ್ಷೇತ್ರಗಳು ಸಂಕಷ್ಟಕ್ಕೆ ಸಿಲುಕಿದ್ದು, ದೇಶದ ಆರ್ಥಿಕತೆ ಶೇ.-23 ರಷ್ಟು ಕುಸಿದಿದೆ. ಸಾಲ ಮರುಪಾವತಿ ಅವಧಿ ಅಥವಾ ಕಂತುಗಳ ಮೇಲಿನ ಬಡ್ಡಿ ಪಾವತಿಸುವ ಅವಧಿಯನ್ನು ಎರಡು ವರ್ಷಗಳವರೆಗೆ ಮುಂದೂಡಿದರೆ ಜನರಿಗೆ ನೆರವಾಗಲಿದೆ ಎಂದು ಕೇಂದ್ರ ಸರ್ಕಾರ ಹಾಗೂ ಆರ್‌ಬಿಐ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನ್ಯಾ.ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ತಿಳಿಸಿದ್ದಾರೆ.

ಲಾಕ್​ಡೌನ್​ ಅವಧಿಯಲ್ಲಿ ಮುಂದೂಡಲ್ಪಟ್ಟ ಇಎಂಐಗಳಿಗೆ ಬಡ್ಡಿ ವಿಧಿಸುವ ಕ್ರಮವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ ಮತ್ತು ಆರ್‌ಬಿಐಗೆ ಸೂಚಿಸಿತ್ತು. ಈ ವಿಚಾರವಾಗಿ ಆರ್​​ಬಿಐ ಸಲ್ಲಿಸಿದ ಅರ್ಜಿಗಳನ್ನ ಬುಧವಾರ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.