ಚೆನ್ನೈ: ನಿನ್ನೆ ಬಾರದ ಲೋಕಕ್ಕೆ ತೆರಳಿದ ಸ್ವರ ಸಾಮ್ರಾಟ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅಂತ್ಯಕ್ರಿಯೆ ಇಂದು ನಡೆಯಲಿದೆ.
ತಿರುವಳ್ಳೂರು ಜಿಲ್ಲೆಯ ತಮಾರೈಪಕ್ಕಂ ಗ್ರಾಮದಲ್ಲಿರುವ ಫಾರ್ಮ್ ಹೌಸ್ನಲ್ಲಿ ಎಸ್ಪಿಬಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು, ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.
ತಮಿಳುನಾಡು ಮಾತ್ರವಲ್ಲದೆ ದೇಶಾದ್ಯಂತ ಜನರ ಹೃದಯ ಗೆದ್ದಿದ್ದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಅಂತ್ಯ ಸಂಸ್ಕಾರದ ವೇಳೆ ಪೊಲೀಸ್ ಇಲಾಖೆಯಿಂದ ಗೌರವ ಸಮರ್ಪಣೆ ಮಾಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳು ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅಂತ್ಯಕ್ರಿಯೆಗಾಗಿ ಶುಕ್ರವಾರ ರಾತ್ರಿ ಸುಮಾರು 9 ಗಂಟೆಗೆ ತಾಮರೈಪಾಕ್ಕಂನಲ್ಲಿರುವ ಫಾರ್ಮ್ ಹೌಸ್ಗೆ ಬಾಲು ಪಾರ್ಥಿವ ಶರೀರವನ್ನು ತರಲಾಯಿತು. ಇದಕ್ಕೂ ಮುನ್ನ ಚೆನ್ನೈನ ಮಹಾಲಿಂಗಪುರಂನಲ್ಲಿರುವ ಬಾಲು ನಿವಾಸದಲ್ಲಿ ಸಾರ್ವಜನಿಕರಿಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ ವೇಳೆ ಸಾವಿರಾರು ಅಭಿಮಾನಿಗಳು ಬಾಲು ದರ್ಶನ ಪಡೆದು ನಮಿಸಿ ಕಂಬನಿ ಮಿಡಿದರು.