ಕನ್ಯಾಕುಮಾರಿ: ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ತಾಯಿಯು ಮಕ್ಕಳನ್ನು ಕೊಂದು ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾಕುಮಾರಿ ಜಿಲ್ಲೆಯಲ್ಲಿ ನಡೆದಿದೆ.
ಬಡತನದಿಂದ ಬಸವಳಿದಿದ್ದ ರಾಶಿ ಎಂಬ ಮಹಿಳೆ ಇಬ್ಬರು ಮಕ್ಕಳಾದ ಅಕ್ಷಯ (5) ಮತ್ತು ಅನಿಯಾ (3) ಗೆ ನಿದ್ದೆ ಮಾತ್ರೆ ನೀಡಿದ್ದು, ಇದರಿಂದ ಮಕ್ಕಳಿಬ್ಬರು ಸಾವನ್ನಪ್ಪಿದ್ದಾರೆ. ಬಳಿಕ ತಾನು ಸಹ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮಹಿಳೆಯ ಪತಿ ಕಳೆದ ವರ್ಷ ನಿಧನರಾದರು. ಬಡತನದಿಂದಾಗಿ ಬದುಕಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಾಥಮಿಕ ತನಿಖೆ ನಡೆಯುತ್ತಿದೆ.