ವಿಜಯವಾಡ: ದುರ್ಗಾ ದೇವಾಲಯದ ಬಳಿಯ ಗುಡ್ಡವೊಂದು ಕುಸಿದು ಬಿದ್ದು, ಮೂವರು ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನವರಾತ್ರಿ ಉತ್ಸವ ಹಿನ್ನೆಲೆ ದೇವಾಸ್ಥಾನದ ಸುತ್ತಮುತ್ತ ಶೆಡ್ ಹಾಕಲಾಗಿತ್ತು. ಕಳೆದ ಮೂರ್ನಾಲ್ಕು ದಿನದಿಂದ ಸುರಿಯತ್ತಿರುವ ಮಳೆಗೆ ಗುಡ್ಡದ ಕೆಲ ಭಾಗ ಕುಸಿದು ಶೆಡ್ ಮೇಲೆ ಬಿದ್ದಿದೆ. ಪರಿಣಾಮ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತಪ್ಪಿದ ದರುಂತ
ಇನ್ನು ಈ ದುರ್ಗಾ ತಾಯಿಗೆ ವಿಶೇಷ ಪೂಜೆ ಮಾಡಿಸಲು ಆಂಧ್ರ ಸಿಎಂ ಜಗನ್ ದೇವಸ್ಥಾನಕ್ಕೆ ಕೆಲವೇ ಕ್ಷಣಗಳಲ್ಲಿ ಬರುತ್ತಿದ್ದರು. ಸಿಎಂ ಬರುವ ಹಿನ್ನೆಲೆ ದೇವಾಲಯದ ಸುತ್ತ - ಮುತ್ತ ಜನರನ್ನು ಬಾರದಂತೆ ತಡೆ ಹಿಡಿಯಲಾಗಿತ್ತು. ಹೀಗಾಗಿ ತಾತ್ಕಾಲಿಕವಾಗಿ ನಿರ್ಮಿಸಿದ ಶೆಡ್ ಅಡಿ ಜನರಿಲ್ಲದಂತಾಗಿತ್ತು. ಪರಿಣಾಮ ಭಾರಿ ದುರಂತವೊಂದು ಸಿಎಂ ಅವರಿಂದಲೇ ತಪ್ಪಿದಂತಾಗಿದೆ.
ಘಟನಾ ಸ್ಥಳದಲ್ಲಿ ಭರದಿಂದ ರಕ್ಷಣಾ ಕಾರ್ಯ ನಡೆದಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಸಿಎಂ ಜಗನ್ ಭೇಟಿ ನೀಡಿ ಪರಿಶೀಲಿನೆ ನಡೆಸಲಿದ್ದಾರೆ.