ETV Bharat / bharat

ಕೇಂದ್ರಕ್ಕೆ ಸವಾಲು: ಕೋಲ್ಕತ್ತಾದಲ್ಲಿ ಶೇ.100ರಷ್ಟು ಸಿನಿಮಾ ಹಾಲ್‌ ಭರ್ತಿಗೆ ಮಮತಾ ಆದೇಶ - 26ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮಾ ಹಬ್ಬ

ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಪಶ್ಚಿಮ ಬಂಗಾಳ ಸರ್ಕಾರ, ಸಿನಿಮಾ ಮಂದಿರಗಳಲ್ಲಿ ಶೇ.100ರಷ್ಟು ಆಸನಗಳನ್ನು ತುಂಬಲು ಅವಕಾಶ ನೀಡಿದೆ.

Mamata Banerjee
Mamata Banerjee
author img

By

Published : Jan 8, 2021, 7:37 PM IST

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಶೇ.100ರಷ್ಟು ಸಿನಿಮಾ ಆಸನಗಳಿಗೆ ಅನುಮತಿ ನೀಡಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದಾರೆ.

ಕಳೆದ ಕೆಲ ದಿನಗಳ ಹಿಂದೆ ತಮಿಳುನಾಡು ಸರ್ಕಾರ ಇಂತಹ ನಿರ್ಧಾರ ಕೈಗೊಂಡಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ತರಾಟೆ ತೆಗೆದುಕೊಂಡು ನಿರ್ಧಾರ ಹಿಂಪಡೆದುಕೊಳ್ಳುವಂತೆ ಸೂಚನೆ ನೀಡಿತ್ತು.

ಓದಿ: ಚಿತ್ರಮಂದಿರಗಳಲ್ಲಿ ಶೇ.100ರಷ್ಟು ಆಸನ ಭರ್ತಿ ಆದೇಶ ಹಿಂಪಡೆಯಿರಿ: ತಮಿಳುನಾಡಿಗೆ ಕೇಂದ್ರದ ಖಡಕ್ ಸೂಚನೆ

26ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಸಿನಿಮಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, ಕೋವಿಡ್​ ಮುಜಾಗ್ರತೆ ಕ್ರಮ ಕೈಗೊಂಡು ಸಿನಿಮಾ ಹಾಲ್​ಗಳಲ್ಲಿ ಶೇ.100ರಷ್ಟು ಆಸನಕ್ಕೆ ಅವಕಾಶ ನೀಡಬಹುದು ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಮತದಾರರ ಓಲೈಕೆ ಮಾಡಲು ಸಿಎಂ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿವೆ.

ಇದಕ್ಕೆ ಕೇಂದ್ರ ಗೃಹ ಸಚಿವಾಲಯ ಯಾವ ರೀತಿಯ ಪ್ರತಿಕ್ರಿಯೆ ನೀಡುತ್ತದೆ ಎಂಬುದು ಎಲ್ಲರಲ್ಲೂ ಕುತೂಹಲ ಮೂಡಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.