ಗ್ವಾಲಿಯರ್(ಮಧ್ಯಪ್ರದೇಶ): ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜಸ್ಥಾನದ ಕೋಟಾದಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳನ್ನು ಕರೆತರಲು ಮಧ್ಯಪ್ರದೇಶ ಸರ್ಕಾರ 150 ಬಸ್ಗಳನ್ನು ಕಳುಹಿಸಿಕೊಟ್ಟಿದೆ.
150 ಬಸ್ಗಳನ್ನು ಸ್ಯಾನಿಟೈಸ್ ಮಾಡಿ ಗ್ವಾಲಿಯರ್ನಿಂದ ಕೋಟಕ್ಕೆ ಕಳುಹಿಸಿಕೊಡಲಾಗಿದೆ. ಚಾಲಕ ಮತ್ತು ನಿರ್ವಾಹಕರಿಗೆ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ಕಿಟ್‌ಗಳನ್ನು ನೀಡಲಾಗಿದೆ ಎಂದು ಗ್ವಾಲಿಯರ್ ವಿಭಾಗೀಯ ಆಯುಕ್ತ ಎಂ.ಬಿ. ಓಜಾ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ವಿದ್ಯಾಭ್ಯಾಸಕ್ಕಾಗಿ ರಾಜಸ್ಥಾನದ ಕೋಟಕ್ಕೆ ತೆರಳಿದ್ದ ಸುಮಾರು 3 ಸಾವಿರ ವಿದ್ಯಾರ್ಥಿಗಳು ಲಾಕ್ಡೌನ್ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಬರಲಾಗದೆ ಅಲ್ಲೆ ಸಿಲುಕಿಕೊಂಡಿದ್ದಾರೆ. ಆ ವಿದ್ಯಾರ್ಥಿಗಳನ್ನು ಕರೆತರಲು ಬಸ್ಗಳನ್ನು ಕಳುಹಿಸಿಕೊಡಲಾಗುತ್ತಿದೆ. ಪ್ರತಿ ಬಸ್‌ನಲ್ಲಿ ಪೊಲೀಸ್ ಸಿಬ್ಬಂದಿ ಇರುತ್ತಾರೆ. ಒಂದು ಬಸ್‌ನಲ್ಲಿ ಕೇವಲ 20 ವಿದ್ಯಾರ್ಥಿಗಳನ್ನು ಮಾತ್ರ ಸಾಗಿಸಲು ಅವಕಾಶವಿರುತ್ತದೆ. ವಿದ್ಯಾರ್ಥಿಗಳು ಬಂದ ನಂತರ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.