ಭೋಪಾಲ್ (ಉ.ಪ್ರ): ರಾಜ್ಯದ ಕೆಲವು ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ಕೋಳಿಗಳಲ್ಲಿ ಕೊರೊನಾ ವೈರಸ್ ಕಂಡುಬಂದಿದೆ ಎನ್ನುವುದು ಆಧಾರರಹಿತ ವರದಿ ಎಂದು ಮಧ್ಯಪ್ರದೇಶದ ಪಶುಸಂಗೋಪನಾ ಇಲಾಖೆ ಸ್ಪಷ್ಟಪಡಿಸಿದೆ.
ಕೋಳಿ ಸೇವನೆಯು ಸಂಪೂರ್ಣವಾಗಿ ಸುರಕ್ಷಿತವಾಗಿದ್ದು, ಸೋಂಕಿಗೆ ಕಾರಣವಾಗುವುದಿಲ್ಲ ಎಂದು ಪಶುಸಂಗೋಪನಾ ವಿಭಾಗದ ನಿರ್ದೇಶಕ ಆರ್.ಕೆ.ರೋಕ್ಡೆ ಸ್ಪಷ್ಟಪಡಿಸಿದ್ದಾರೆ.
ಈ ಸುದ್ದಿ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಕೋಳಿ ಸಾಕಣೆ ಅಥವಾ ಕೋಳಿ ಸಾಕಾಣಿಕೆ ಕೇಂದ್ರಗಳನ್ನು ಮುಚ್ಚುವ ಬಗ್ಗೆ ಆರೋಗ್ಯ ಇಲಾಖೆಯಿಂದ ಯಾವುದೇ ಮಾರ್ಗಸೂಚಿಗಳು ಅಥವಾ ಎಚ್ಚರಿಕೆ ಪತ್ರಗಳನ್ನು ನೀಡಿಲ್ಲ ಎಂದು ಅವರು ಹೇಳಿದ್ದಾರೆ.
ಕೋಳಿಗಳಲ್ಲಿ ಕೊರೊನಾ ವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ ಎಂದು ರೋಕ್ಡೆ ಹೇಳಿದ್ದಾರೆ.