ರಾಜಘಡ(ಮಧ್ಯಪ್ರದೇಶ): ರಾತ್ರಿ ವೇಳೆ ಬಸ್ಸ್ಟ್ಯಾಂಡ್ನಲ್ಲಿ ನಿಂತಿದ್ದ ಬಸ್ನಲ್ಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಕೃತ್ಯ ಮಧ್ಯಪ್ರದೇಶದ ರಾಜಘಡ್ದಲ್ಲಿ ನಡೆದಿದೆ.
ಇಲ್ಲಿನ ಬೈರೋ ಬಸ್ ಸ್ಟ್ಯಾಂಡ್ನಲ್ಲಿ ನಿಂತಿದ್ದ ಬಸ್ನಲ್ಲಿ ರಾತ್ರಿ ವೇಳೆ ಈ ಘಟನೆ ನಡೆದಿದೆ. ಇದಕ್ಕೂ ಮುಂಚಿತವಾಗಿ ಮಗಳು ಕಾಣೆಯಾಗಿದ್ದಾಳೆ ಎಂದು ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸುತ್ತಿದ್ದಂತೆ ಬಸ್ನಲ್ಲಿ ಇಬ್ಬರೊಂದಿಗೆ ಬಾಲಕಿ ಪತ್ತೆಯಾಗಿದ್ದಾಳೆ.
ಈ ವೇಳೆ ಬಾಲಕಿ, ತನ್ನ ಮೇಲೆ ಓರ್ವ ವ್ಯಕ್ತಿ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರ ಮುಂದೆ ಹೇಳಿಕೊಂಡಿದ್ದಾಳೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿದೆ.