ನವದೆಹಲಿ: ಹೃದಯಾಘಾತದಿಂದ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಸಹೋದರ ಮತ್ತು ಸಂಸದ ರಾಮಚಂದ್ರ ಪಾಸ್ವಾನ್ (56) ಅವರು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ರಾಮಚಂದ್ರ ಪಾಸ್ವಾನ್ ಅವರು ವಾರದ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರು. ಪಾಸ್ವಾನ್ ಅವರು ಲೋಕ ಜನಶಕ್ತಿ ಪಕ್ಷದ ಹಿರಿಯ ನಾಯಕರೂ ಆಗಿದ್ದರು. ಬಿಹಾರದ ಸಂಸ್ಟಿಪುರ್ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಪತ್ನಿ ಸುನೈನಾ ಕುಮಾರಿ, ಮೂವರು ಮಕ್ಕಳನ್ನು ಅಗಲಿದ್ದಾರೆ.