ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ವೆಂಟಿಲೇಟರ್ ಸಹಾಯದೊಂದಿಗೆ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಆಗಸ್ಟ್ 10 ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. ಬಳಿಕ ಅದೇ ದಿನ ರಾತ್ರಿ ದೆಹಲಿಯ ಆರ್ಆರ್ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮಿದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಬಳಿಕ ಅವರನ್ನು ವೆಂಟಿಲೇಟರ್ನಲ್ಲಿ ಇರಿಸಲಾಗಿದೆ.
ಇಂದು ಕೂಡ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಗಳು ಕಂಡು ಬಂದಿಲ್ಲ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ಪ್ರಣಬ್ ಮುಖರ್ಜಿ ಅವರಿಗೆ ಚಿಕಿತ್ಸೆ ನೀಡುತ್ತಿರುವ ಆರ್ಆರ್ ಮಿಲಿಟರಿ ಆಸ್ಪತ್ರೆ ವೈದ್ಯರು ಹೇಳಿದ್ದಾರೆ.
ಪ್ರಣಬ್ ಮುಖರ್ಜಿ ಅವರು 2012 ರಿಂದ 2017ರ ವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದಾರೆ.