ETV Bharat / bharat

ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾವಿಗೀಡಾದ ಮುಂಬೈ ಕಾನ್ಸ್​ಟೇಬಲ್​ - ಮುಂಬೈ ಕಾನ್ಸ್​ಟೇಬಲ್​

ವಲಸೆ ಕಾರ್ಮಿಕರನ್ನು ವಾಪಸ್​ ಕಳುಹಿಸುವ ಕಾರ್ಯಕ್ಕೆ ನೇಮಕವಾಗಿದ್ದ ಕಾನ್ಸ್​ಟೇಬಲ್​ವೋರ್ವ​ ಮಾರಣಾಂತಿಕ ಕೊರೊನಾ ವೈರಸ್‌ಗೆ ತುತ್ತಾಗಿ ಆಸ್ಪತ್ರೆಗೆ ಸೇರಿದ್ದರು. ಇದೀಗ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ.

Mumbai cop dies
ಮುಂಬೈ ಕಾನ್ಸ್​ಟೇಬಲ್
author img

By

Published : May 31, 2020, 11:28 PM IST

ಮುಂಬೈ : ಪೊಲೀಸ್ ಕಾನ್ಸ್​ಟೇಬಲ್​ವೋರ್ವರು​ ಕೋವಿಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಕೆಲವೇ ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಲ್ಲಿನ ಅಧಿಕಾರಿ ಮಾಹಿತಿ ನೀಡಿದ್ದಾರೆ.

ದೀಪಕ್ ಹೇಟ್​ ಎಂಬ ಕಾನ್ಸ್​ಟೇಬಲ್​​ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಇವರನ್ನು ವಲಸೆ ಕಾರ್ಮಿಕರನ್ನು ಕರೆದೊಯ್ಯಲು ನೇಮಕ ಮಾಡಲಾಗಿತ್ತು. ಈ ಸಂದರ್ಭದಲ್ಲಿ ಅವರಿಗೆ ಕೊರೊನಾ ಪಾಸಿಟಿವ್​ ಬಂದಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರ ಜೊತೆ ಸಂಪರ್ಕದಲ್ಲಿದ್ದ ಮೂವರು ಸಹೋದ್ಯೋಗಿಗಳಿಗೂ ಕೊರೊನಾ ಸೋಂಕು ಕಂಡು ಬಂದಿತ್ತು ಎಂದು ವೈದ್ಯರು ತಿಳಿಸಿದ್ದರು.

ನಂತರ ಅವರನ್ನು ನ್ಯಾಷನಲ್ ಸ್ಪೋರ್ಟ್ಸ್ ಕ್ಲಬ್ ಆಫ್ ಇಂಡಿಯಾದ (ಎನ್‌ಎಸ್‌ಸಿಐ ಡೋಮ್) ಕೋವಿಡ್ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆದ ಕೆಲವೇ ಗಂಟೆಯಲ್ಲಿ ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.