ETV Bharat / bharat

ಮುಂಬೈ ಸಿಲಿಂಡರ್ ಸ್ಫೋಟ ಪ್ರಕರಣ: 10ಕ್ಕೆ ತಲುಪಿದ ಮೃತರ ಸಂಖ್ಯೆ

author img

By

Published : Dec 28, 2020, 6:22 PM IST

ಮುಂಬೈನ ಲಾಲ್‌ಬಾಗ್​ ಪ್ರದೇಶದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಮಹಿಳೆ ಮೃತಪಟ್ಟಿದ್ದು, ಘಟನೆಯಲ್ಲಿ ಒಟ್ಟು 10 ಮಂದಿ ಬಲಿಯಾದಂತಾಗಿದೆ.

Mumbai: Lalbaug cylinder blast-fire incident toll reaches 10
ಸಂಗ್ರಹ ಚಿತ್ರ

ಮುಂಬೈ (ಮಹಾರಾಷ್ಟ್ರ): ಮುಂಬೈನ ಲಾಲ್‌ಬಾಗ್ ಪ್ರದೇಶದಲ್ಲಿ ಡಿಸೆಂಬರ್ 6ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ 45 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಗಾಯಗೊಂಡಿದ್ದ ವೈಶಾಲಿ ಎಂಬ ಮಹಿಳೆ ಭಾನುವಾರ ಬೈಕುಲ್ಲಾದ ಮಸಿನಾ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಈ ಮೂಲಕ ಮೃತರ ಸಂಖ್ಯೆ 10ಕ್ಕೆ ತಲುಪಿದೆ ಎಂದು ಸ್ಥಳೀಯ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಗಣೇಶ್ ಗಲ್ಲಿ ಪ್ರದೇಶದ ಸರಬೈ ಕಟ್ಟಡದ ಎರಡನೇ ಮಹಡಿಯಲ್ಲಿ ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 16 ಮಂದಿ ಗಾಯಗೊಂಡಿದ್ದರು. ಭಾರಿ ಪ್ರಮಾಣದ ಸುಟ್ಟ ಗಾಯಗಳಾಗಿದ್ದರಿಂದ ಈವರೆಗೆ 10 ಜನ ಮೃತಪಟ್ಟಂತಾಗಿದೆ.

ಇದನ್ನೂ ಓದಿ : ಮುಂಬೈ ಸಿಲಿಂಡರ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಉಳಿದ ಆರು ಮಂದಿಯಲ್ಲಿ ಮೂವರನ್ನು ಕೆಇಎಂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಇನ್ನೂ ಮೂವರನ್ನು ಮಸಿನಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದ್ಯಕ್ಕೆ ಅವರ ಸ್ಥಿತಿ ಸ್ಥಿರವಾಗಿದೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.