ಮುಂಬೈ: ಕಳೆದ ಕೆಲ ವಾರಗಳ ಹಿಂದ್ದೆ ಅಬ್ಬರಿಸಿದ್ದ ವರುಣ ಮತ್ತೆ ಮುಂಬೈ, ಥಾಣೆ, ಪಾಲ್ಗಾರ್ ಸುತ್ತ ಮುತ್ತ ಅಬ್ಬರಿಸುತ್ತಿದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.
ಭಾರಿ ಮಳೆಯಿಂದ ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮುಂದಿನ 24 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಗತ್ಯ ಕ್ರಮಗಳನ್ನ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನಿಡಲಾಗಿದೆ.
ಭಾರಿ ಮಳೆಯಿಂದ ಹಲವು ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈನ ಹಲವೆಡೆ 300 ಮಿಲಿ ಮೀಟರ್ಗೂ ಅಧಿಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಭಾರಿ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಿಮಾನ ಪ್ರಯಾಣಕ್ಕೂ ವರುಣ ಅಡ್ಡಲಾಗಿದ್ದಾನೆ.