ETV Bharat / bharat

ಲವ್ ಜಿಹಾದ್ ವಿರುದ್ಧ ಜಾರಿಗೆ ತರಲಾಗಿರುವ ಸುಗ್ರೀವಾಜ್ಞೆಗೆ ನಮ್ಮ ಆಕ್ಷೇಪವಿಲ್ಲ; ಆದರೆ..!!

author img

By

Published : Nov 25, 2020, 7:53 PM IST

ಬಲವಂತದ ಮತಾಂತರದ ವಿರುದ್ಧ ಕಾನೂನು ಈಗಾಗಲೇ ಉಲ್ಲೇಖಿಸಲಾಗಿದೆ. ಆದರೆ, ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ಇರುವುದರಿಂದ ಇದು ರಾಜಕೀಯ ರೂಪಡೆಯಬಹುದು. ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷ ಹುಟ್ಟುಹಾಕಬಹುದು.

Muslims react with caution to UP govt's ordinance against conversion for marriage
ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ: ಲವ್ ಜಿಹಾದ್ ವಿರುದ್ಧ ಕಾನೂನು ಸಮರ ಸಾರಿದ್ದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ​ ಸರ್ಕಾರ ಜಾರಿಗೆ ತಂದ ಸುಗ್ರೀವಾಜ್ಞೆಗೆ ಮುಸ್ಲಿಂ ಮುಖಂಡರು ಸ್ವಾಗತ ಮಾಡಿದ್ದಾರೆ. ಜಾರಿಯಾದ ಸುಗ್ರೀವಾಜ್ಞೆಯಿಂದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು ಎಂದು ಹಲವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟವು ಮಂಗಳವಾರ ಈ ಬಗ್ಗೆ ಸುಗ್ರೀವಾಜ್ಞೆಗೆ ಹೊರಡಿಸಿದೆ. ಕಾನೂನೂ ಮೀರಿದವರಿಗೆ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಅದರ ಷರತ್ತುಗಳನ್ನು ಉಲ್ಲಂಘಿಸಿದವರಿಗೆ 50,000 ರೂ. ದಂಡ ವಿಧಿಸುವುದಾಗಿ ತಿಳಿಸಿದ್ದಾರೆ. ಈ ಕಾನೂನನ್ನು ಜಾರಿಗೆ ತಂದಿದ್ದು ಒಳ್ಳೆಯದು. ಆದರೆ, ನಮ್ಮ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಕೇವಲ ಮದುವೆಗಾಗಿ ಮಾತ್ರ ಧಾರ್ಮಿಕ ಮತಾಂತರ ಬಗ್ಗೆ ನಮ್ಮ ಆಕ್ಷೇಪವಿಲ್ಲ. ಬಲವಂತದ ಮತಾಂತರ ಮಾಡುವುದರ ಬಗ್ಗೆ ಈಗಾಗಲೇ ಮುಸ್ಲಿಂ ಕಾನೂನಿನಲ್ಲಿ ಅಪರಾಧವೆಂದು ಪರಿಗಣಿಸಲ್ಪಟ್ಟಿದೆ. ಕುರಾನಿನಲ್ಲೂ ಉಲ್ಲೇಖವಿದೆ. ಧರ್ಮದ ಹೆಸರಿನಲ್ಲಿ ನಡೆಯುವ ಬಲವಂತದ ಮತಂತಾರವನ್ನು ನಮ್ಮ ದೇವರು(ಅಲ್ಲಾಹು) ಸಮರ್ಥಿಸುವುದಿಲ್ಲ. ಆದ್ದರಿಂದ ಕಾನೂನು ಮೀರಿದವರಿಗೆ ಶಿಕ್ಷೆ ವಿಧಿಸಲು ನಮಗೆ ಯಾವುದೇ ಆಕ್ಷೇಪವಿಲ್ಲ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ (ಎಐಎಂಪಿಎಲ್‌ಬಿ) ಹಿರಿಯ ಸದಸ್ಯ ಖಾಲಿದ್ ರಶೀದ್ ಫರಂಗಿಮಹ್ಲಿ ಮಾಧ್ಯಮಗಳಿಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.

ಶಾಂತಿ ಮತ್ತು ಕೋಮು ಸೌಹಾರ್ದತೆಗಾಗಿ ಮುಸ್ಲಿಮರು ಮತ್ತು ಹಿಂದೂಗಳು ತಮ್ಮ ಸಮುದಾಯಗಳಲ್ಲಿ ಮದುವೆಯಾಗುವುದು ಅಗತ್ಯ ಎಂದು ನಾವು ಅಭಿಪ್ರಾಯಪಟ್ಟಿದ್ದೇವೆ. ಆದರೂ, ಸುಗ್ರೀವಾಜ್ಞೆಯಲ್ಲಿ ತಂದ ಕಾನೂನಿಗೂ ನಮ್ಮ ಆಕ್ಷೇಪವಿಲ್ಲ ಎಂದು ಫರಂಗಿಮಹ್ಲಿ ಹೇಳಿದರು.

ಇನ್ನು ಕೆಲವು ಮುಸ್ಲಿಂ ಮುಖಂಡರು ರಾಜ್ಯ​ ಸರ್ಕಾರ ಜಾರಿಗೆ ತಂದ ಸುಗ್ರೀವಾಜ್ಞೆಗೆ ವಿರೋಧ ಸಹ ವ್ಯಕ್ತಪಡಿಸಿದ್ದಾರೆ. ಜಾರಿಗೆ ತಂದ ನೂತನ ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳಬೇಕು. ಅಲ್ಲದೇ ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕಿಗೆ ಧಕ್ಕೆ ಆಗದಂತೆ ಕಠಿಣ ಕಾನೂನಿನ ತರುವುದು ಅಗತ್ಯವಿದೆ ಎಂದು ಅಖಿಲ ಭಾರತ ಮುಸ್ಲಿಂ ಮಹಿಳಾ ವೈಯಕ್ತಿಕ ಕಾನೂನು ಮಂಡಳಿಯ ಅಧ್ಯಕ್ಷ ಶೈಸ್ತಾ ಅಂಬರ್ ಅಭಿಪ್ರಾಯಪಟ್ಟಿದ್ದಾರೆ.

ಹಿರಿಯ ಎಐಎಂಪಿಎಲ್‌ಬಿ ಸದಸ್ಯ ಜಾಫರ್ಯಾಬ್ ಜಿಲಾನಿ ಮಾತನಾಡಿ ವಿವಿಧ ಜಾತಿ, ಧರ್ಮ ಅಥವಾ ರಾಷ್ಟ್ರಗಳಿಗೆ ಸೇರಿದ ಇಬ್ಬರು ವಯಸ್ಕರು ವಿವಾಹವಾದರೆ ಅವರ ಮದುವೆ ಅವರ ಖಾಸಗಿ ಹಕ್ಕು ಎಂದು ವಾದಿಸಿದರು. ಇನ್ನು ಹಲವರು ಬಲವಂತದ ಮತಾಂತರದ ವಿರುದ್ಧ ಕಾನೂನು ಈಗಾಗಲೇ ಅಸ್ತಿತ್ವದಲ್ಲಿದೆ. ಆದರೆ, ಪಶ್ಚಿಮ ಬಂಗಾಳ ವಿಧಾನಸಭೆಗೆ ಚುನಾವಣೆ ಇರುವುದರಿಂದ ಇದು ರಾಜಕೀಯವಾಗಿ ರೂಪತಾಳಬಹುದು. ಹಿಂದೂ ಮತ್ತು ಮುಸ್ಲಿಮರ ನಡುವೆ ದ್ವೇಷವನ್ನು ಉಂಟುಮಾಡಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.