ETV Bharat / bharat

ರಾಜ್ಯದಲ್ಲಿ NRC ಜಾರಿ ಅಸಾಧ್ಯ ಎಂದ ಆಂಧ್ರ ಸಿಎಂ... ಸಿಎಎ ವಿರೋಧಿಸಿದ ಉದ್ಧವ್​! - ಆಂಧ್ರದಲ್ಲಿ ಎನ್​ಆರ್​​ಸಿ

ರಾಷ್ಟ್ರೀಯ ಪೌರತ್ವ ಕಾಯ್ದೆ ಹಾಗೂ ರಾಷ್ಟ್ರೀಯ ನೋಂದಣಿ ಪ್ರಕ್ರಿಯೆ ವಿರುದ್ಧ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಮಹಾರಾಷ್ಟ್ರ, ಆಂಧ್ರಪ್ರದೇಶ ಮುಖ್ಯಮಂತ್ರಿಗಳು ಇದರ ವಿರುದ್ಧ ಧ್ವನಿಗೂಡಿಸಿದ್ದಾರೆ.

Andhra Pradesh CM
ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​​ ಜಗನ್​​ಮೋಹನ್​ ರೆಡ್ಡಿ
author img

By

Published : Dec 23, 2019, 8:43 PM IST

ವಿಜಯವಾಡ/ಮುಂಬೈ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್​​​ಆರ್​​ಸಿ) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​​ ಜಗನ್​​ಮೋಹನ್​ ರೆಡ್ಡಿ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಕೂಡ ಧ್ವನಿ ಗೂಡಿಸಿದ್ದಾರೆ.

ಕಡಪಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ, ನನ್ನ ಸರ್ಕಾರ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಯಾಗಿದ್ದು, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅದನ್ನ ಜಾರಿಗೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಎನ್ಆರ್‌ಸಿ ಜಾರಿ ಮಾಡುವ ಕುರಿತು ನನ್ನ ಸಹೋದದರಿಗೆ ಅಭಿಪ್ರಾಯ ತಿಳಿಸುವಂತೆ ಹೇಳಿದ್ದೆ. ಸದ್ಯ ಈ ಕುರಿತು ಸ್ಪಷ್ಟ ನಿರ್ಧಾರವನ್ನು ಮಾಡಿದ್ದು, ಆಂಧ್ರಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಎನ್ಆರ್‌ಸಿ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದಿದ್ದಾರೆ. ಆದರೆ, ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ಪಾಸ್​ ಆಗಲು ಕೇಂದ್ರದ ಜತೆ ವೈಎಸ್​ಆರ್​ ಕಾಂಗ್ರೆಸ್​​ ಸಂಸದರು ಕೈಜೋಡಿಸಿದ್ದರು.

ಇನ್ನು, ಇದೇ ವಿಷಯವಾಗಿ ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ ಸಹ ಪೌರತ್ವ ತಿದ್ದುಪಡಿ ಕಾಯ್ದೆಗೆ ನಮ್ಮ ವಿರೋಧವಿದ್ದು, ನಾನು ರಾಜ್ಯದಲ್ಲಿನ ಮುಸ್ಲಿಂ ಮುಖಂಡರೊಂದಿಗೆ ಮಾತುಕತೆ ನಡೆಸುವೆ ಎಂದು ತಿಳಿಸಿದ್ದಾರೆ. ಜತೆಗೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡಲ್ಲ ಎಂದಿದ್ದಾರೆ. ನಾವು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿದ್ದು, ಯಾವುದೇ ಕಾರಣಕ್ಕೂ ಧರ್ಮದ ಮೇಲೆ ಆಡಳಿತ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ.

ಇದಕ್ಕೂ ಮುಂಚಿತವಾಗಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಎನ್​​ಸಿಪಿ ಮುಖಂಡ ಶರದ್​ ಪವಾರ್​, ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಎನ್​ಆರ್​ಸಿ ಹಾಗೂ ಸಿಎಎ ಕಾರ್ಯರೂಪಕ್ಕೆ ಬರಲು ಬಿಡಲ್ಲ ಎಂದು ತಿಳಿಸಿದ್ದರು.

Intro:Body:

ರಾಜ್ಯದಲ್ಲಿ NRC ಜಾರಿ ಅಸಾಧ್ಯ ಎಂದ ಆಂಧ್ರ ಸಿಎಂ... ಸಿಎಎ ವಿರೋಧಿಸಿದ ಮಹಾ ಸಿಎಂ ಉದ್ಧವ್​! 

ವಿಜಯವಾಡ/ಮುಂಬೈ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್​​​ಆರ್​​ಸಿ) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದೀಗ ಇದಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್​​ ಜಗನ್​​ಮೋಹನ್​ ರೆಡ್ಡಿ ಹಾಗೂ ಮಹಾರಾಷ್ಟ್ರ ಸಿಎಂ ಉದ್ಧವ್​ ಠಾಕ್ರೆ ಕೂಡ ಧ್ವನಿ ಗೂಡಿಸಿದ್ದಾರೆ. 

ಕಡಪಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮಾತನಾಡಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ, ನನ್ನ ಸರ್ಕಾರ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಯಾಗಿದ್ದು,ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅದನ್ನ ಜಾರಿಗೊಳ್ಳಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಆದರೆ ರಾಜ್ಯಸಭೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮಸೂದೆ ಪಾಸ್​ ಆಗಲು ಕೇಂದ್ರದ ಜತೆ ವೈಎಸ್​ಆರ್​ ಕಾಂಗ್ರೆಸ್​​ ಸಂಸದರು ಕೈಜೋಡಿಸಿದ್ದರು.  

ಇನ್ನು ಇದೇ ವಿಷಯವಾಗಿ ಮಾತನಾಡಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​​ ಠಾಕ್ರೆ ಸಹ ಪೌರತ್ವ ತಿದ್ದುಪಡಿ ಕಾಯ್ದೆಗೆ ನಮ್ಮ ವಿರೋಧವಿದ್ದು, ನಾನು ರಾಜ್ಯದಲ್ಲಿನ ಮುಸ್ಲಿಂ ಮುಖಂಡರೊಂದಿಗೆ ಮಾತುಕತೆ ನಡೆಸುವೆ ಎಂದು ತಿಳಿಸಿದ್ದಾರೆ. ಜತೆಗೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗಲು ಬಿಡಲ್ಲ ಎಂದಿದ್ದಾರೆ. ನಾವು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಹೊಂದಿದ್ದು, ಯಾವುದೇ ಕಾರಣಕ್ಕೂ ಧರ್ಮದ ಮೇಲೆ ಆಡಳಿತ ನಡೆಸಲು ಸಾಧ್ಯವಿಲ್ಲ ಎಂದಿದ್ದಾರೆ. 

ಇದಕ್ಕೂ ಮುಂಚಿತವಾಗಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದ ಎನ್​​ಸಿಪಿ ಮುಖಂಡ ಶರದ್​ ಪವಾರ್​, ಮಹಾರಾಷ್ಟ್ರದಲ್ಲಿ ಯಾವುದೇ ಕಾರಣಕ್ಕೂ ಎನ್​ಆರ್​ಸಿ ಹಾಗೂ ಸಿಎಎ ಕಾರ್ಯರೂಪಕ್ಕೆ ಬರಲು ಬಿಡಲ್ಲ ಎಂದು ತಿಳಿಸಿದ್ದರು. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.