ಕಟುವಾ : ಜಮ್ಮು ಮತ್ತು ಕಾಶ್ಮೀರದ ಕಟುವಾ ಪ್ರದೇಶದಲ್ಲಿ ಕಳೆದ ವರ್ಷ 8 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆಗೈಯ್ಯಲಾಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪಠಣ್ಕೋಟ್ನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ತೀರ್ಪು ಹೊರಬೀಳಲಿದೆ.
ಈ ವಿಚಾರಣೆಯನ್ನು ಕಳೆದ ವರ್ಷ ಮೇ 7ರಂದು ಸುಪ್ರೀಂಕೋರ್ಟ್, ಪಟಾಣ್ಕೋಟ್ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಇಂದು ನಡೆಯುತ್ತಿರುವ ವಿಚಾರಣೆಯಲ್ಲಿ ಜಡ್ಜ್ ತೇಜ್ವಿಂದರ್ ಸಿಂಗ್ ತೀರ್ಪು ನೀಡಲಿದ್ದಾರೆ. ವಿಚಾರಣೆ ನಡೆಯುತ್ತಿರುವ ನ್ಯಾಯಾಲಯದ ಸುತ್ತ ಬಿಗಿ ಭದ್ರತೆ ಒದಗಿಸಲಾಗಿದೆ. ಅತ್ಯಾಚಾರದ ಆರೋಪಿಗಳನ್ನು ಗುರುದಾಸ್ಪುರ ಜೈಲಿನಲ್ಲಿ ಇಡಲಾಗಿದ್ದು, ಇಂದು ಬೆಳಗ್ಗೆ 10 ಗಂಟೆಗೆ ವಿಚಾರಣೆ ನಡೆಸುತ್ತಿರುವ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
2018 ಜನವರಿ 8 ರಂದು 8 ವರ್ಷದ ಹೆಣ್ಣು ಮಗುವನ್ನು ಅಪಹರಿಸಿ ಕಟುವಾ ಜಿಲ್ಲೆಯ ದೇವಾಲಯದಲ್ಲಿ ಅತ್ಯಾಚಾರ ಮಾಡಲಾಗಿದ್ದು, ನಂತರ ಆ ಬಾಲಕಿಯನ್ನು ಕೊಲೆಗೈಯ್ಯಲಾಗಿತ್ತು. ಈ ಕೇಸ್‌ಗೆ ಸಂಬಂಧಿಸಿದಂತೆ ಸಂಜಿ ತಾಮ್, ವಿಶಾಲ್, ಹುವೆನಿಲ್, ಆನಂದ್ ದತ್ ಎಂಬುವರನ್ನು ಬಂಧಿಸಲಾಗಿತ್ತು. ಅಷ್ಟೇ ಅಲ್ಲದೆ, ಈ ಕೇಸ್ನ ಸಾಕ್ಷ್ಯಗಳನ್ನು ನಾಶ ಮಾಡುತ್ತೇವೆಂದು 4 ಲಕ್ಷ ಹಣ ಪಡೆದಿದ್ದ ಹೆಡ್ ಕಾನ್‌ಸ್ಟೇಬಲ್ ತಿಲಕ್ ರಾಜ್ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ್ ದತ್ ಎಂಬುವರನ್ನೂ ಇದೇ ಕೇಸ್‌ಗೆ ಸಂಬಂಧಿಸಿದಂತೆ ಬಂಧಿಸಲಾಗಿತ್ತು.