ನವದೆಹಲಿ: ಬಿಜೆಪಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ಧುಪಡಿಸಿ ದ 24 ಗಂಟೆಗಳ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ 'ಜನರು ನಿಮಗೆ ಕೊಟ್ಟ ಅಧಿಕಾರವನ್ನು ಕೆಟ್ಟ ಮಾರ್ಗದಲ್ಲಿ ಬಳಸಿಕೊಂಡು, ಜಮ್ಮು- ಕಾಶ್ಮೀರ ರಾಜ್ಯವನ್ನು ಹರಿದು ಹಾಕಿದ್ದೀರಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
'ನೀವು ಹೇಗೆ ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಬಂಧಿಸಿದ್ರಿ. ಇದರಿಂದ ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದಂತಾಗಿದೆ. ಹಾಗೂ ರಾಷ್ಟ್ರೀಯ ಏಕತೆ ವೃದ್ಧಿಯಾಗಿಲ್ಲ. ಈ ದೇಶವು ಜನರಿಂದ ರೂಪುಗೊಂಡಿದೆ. ಭೂಮಿಯ ತುಂಡುಗಳಿಂದಲ್ಲ' ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.
-
National integration isn’t furthered by unilaterally tearing apart J&K, imprisoning elected representatives and violating our Constitution. This nation is made by its people, not plots of land.
— Rahul Gandhi (@RahulGandhi) August 6, 2019 " class="align-text-top noRightClick twitterSection" data="
This abuse of executive power has grave implications for our national security.
">National integration isn’t furthered by unilaterally tearing apart J&K, imprisoning elected representatives and violating our Constitution. This nation is made by its people, not plots of land.
— Rahul Gandhi (@RahulGandhi) August 6, 2019
This abuse of executive power has grave implications for our national security.National integration isn’t furthered by unilaterally tearing apart J&K, imprisoning elected representatives and violating our Constitution. This nation is made by its people, not plots of land.
— Rahul Gandhi (@RahulGandhi) August 6, 2019
This abuse of executive power has grave implications for our national security.
ಬಿಜೆಪಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದೆ. ಅಲ್ಲದೇ ಈ ನಿರ್ಧಾರ ಭಾರತದ ರಾಷ್ಟ್ರೀಯ ಭದ್ರತೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ರಾಹುಲ್ ಹೇಳಿದ್ರು. ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಸಂಬಂಧ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.