ETV Bharat / bharat

ಈ ಬಾರಿ ಜ.31ರಂದು ಪಲ್ಸ್​ ಪೋಲಿಯೋ ಕಾರ್ಯಕ್ರಮ - Polio vaccination

ಜನವರಿ 17 ರಂದು ನಿಗದಿಯಾಗಿದ್ದ ಪಲ್ಸ್​ ಪೋಲಿಯೋ ಕಾರ್ಯಕ್ರಮ ಜನವರಿ 31ಕ್ಕೆ ಮುಂದೂಡಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

National Polio Immunisation Day rescheduled to Jan 31
ಪಲ್ಸ್​ ಪೋಲಿಯೋ ಕಾರ್ಯಕ್ರಮ ಜ. 31ಕ್ಕೆ ಮುಂದೂಡಿಕೆ
author img

By

Published : Jan 14, 2021, 5:25 PM IST

Updated : Jan 14, 2021, 5:50 PM IST

ನವದೆಹಲಿ: ಕೋವಿಡ್ -19 ಲಸಿಕೆ ವಿತರಣೆಗೆ ಚಾಲನೆ ಹಿನ್ನೆಲೆಯಲ್ಲಿ ಜನವರಿ 17 ರಂದು ನಿಗದಿಯಾಗಿದ್ದ ಪಲ್ಸ್​ ಪೋಲಿಯೋ ಕಾರ್ಯಕ್ರಮ ಜನವರಿ 31ಕ್ಕೆ ಮುಂದೂಡಿಕೆಯಾಗಿದೆ.

ಜ.17ರಂದು ಪಲ್ಸ್​ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅಂದು 'ರಾಷ್ಟ್ರೀಯ ಪೋಲಿಯೋ ರೋಗನಿರೋಧಕ ದಿನ'ವನ್ನಾಗಿ ಆಚರಿಸಲು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು. ಆದರೆ ಜ.16 ರಂದು ದೇಶಾದ್ಯಂತದ COVID-19 ವ್ಯಾಕ್ಸಿನೇಷನ್ ಡ್ರೈವ್ ಪ್ರಾರಂಭವಾಗಲಿದೆ. ಹೀಗಾಗಿ ಪಲ್ಸ್​ ಪೋಲಿಯೋ ಲಸಿಕೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಜನವರಿ 31 ರಂದು ರಾಷ್ಟ್ರಪತಿ ಭವನದಲ್ಲಿ ಬೆಳಿಗ್ಗೆ 11.45 ಕ್ಕೆ ಕೆಲವು ಮಕ್ಕಳಿಗೆ ಪೋಲಿಯೋ ಹನಿಗಳನ್ನು ಹಾಕುವ ಮೂಲಕ ರಾಷ್ಟ್ರಪತಿ ರಾಮ್​ ನಾಥ್ ಕೋವಿಂದ್ ರಾಷ್ಟ್ರೀಯ ರೋಗನಿರೋಧಕ ದಿನಕ್ಕೆ ಚಾಲನೆ ನೀಡಲಿದ್ದಾರೆ.

Last Updated : Jan 14, 2021, 5:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.