ಕಿಶನ್ಗಂಜ್(ಬಿಹಾರ): ಇಂಡೋ-ನೇಪಾಳ ಗಡಿಯಲ್ಲಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಭಾರತ, ನೇಪಾಳ ಗಡಿ ಕಿಶನ್ಗಂಜ್ನಲ್ಲಿ ನೇಪಾಳ ಪೊಲೀಸರು, ಮೂವರು ಭಾರತೀಯ ವ್ಯಕ್ತಿಗಳ ಮೇಲೆ ಗುಂಡು ಹಾರಿಸಿದ್ದಾರೆ. ಇದರಲ್ಲಿ ಒಬ್ಬ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಕಿಶನ್ಗಂಜ್ಎಸ್ಪಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯ ತೆಘಗಾಚ್ ಬ್ಲಾಕ್ನಲ್ಲಿರುವ ಇಂಡೋ-ನೇಪಾಳ ಗಡಿಯಲ್ಲಿ ನೇಪಾಳ ಪೊಲೀಸರು ಮತ್ತೊಮ್ಮೆ ಗುಂಡು ಹಾರಿಸಿದ್ದು, ಗುಂಡಿನ ದಾಳಿಯಲ್ಲಿ ಜಿತೇಂದ್ರ ಕುಮಾರ್ ಸಿಂಗ್ ಎಂಬ ಯುವಕ ಗಾಯಗೊಂಡಿದ್ದಾನೆ. ಆತನನ್ನು ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಪೂರ್ಣಿಯಾಕ್ಕೆ ಕಳುಹಿಸಲಾಗಿದೆ.