ETV Bharat / bharat

ಸುಭಾಷ್ ಚಂದ್ರಬೋಸ್ ಸೋದರಸೊಸೆ ಚಿತ್ರಾ ಘೋಷ್ ನಿಧನ - ಹೃದಯಾಘಾತದಿಂದ ಚಿತ್ರಾ ಘೋಷ್ ನಿಧನ

ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಸೊಸೆ, ಪ್ರಖ್ಯಾತ ಶಿಕ್ಷಣ ತಜ್ಞೆ ಚಿತ್ರಾ ಘೋಷ್ ಹೃದಯಾಘಾತದಿಂದ ನಿಧನರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

condolence
condolence
author img

By

Published : Jan 8, 2021, 4:28 PM IST

ಕೋಲ್ಕತ್ತಾ (ಪಶ್ಚಿಮ ಬಂಗಾಳ): ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಸೊಸೆ, ಪ್ರಖ್ಯಾತ ಶಿಕ್ಷಣ ತಜ್ಞೆ ಚಿತ್ರಾ ಘೋಷ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಸೋದರಳಿಯ ಮತ್ತು ಬಿಜೆಪಿ ನಾಯಕ ಚಂದ್ರಕುಮಾರ್ ಬೋಸ್ ಮಾಹಿತಿ ನೀಡಿದ್ದಾರೆ.

‘ಪ್ರಾಧ್ಯಾಪಕಿ ಚಿತ್ರಾ ಘೋಷ್ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ನೇತಾಜಿಗೆ ಸಂಬಂಧಿಸಿದ ಕೆಲ ವಿಚಾರಗಳ ಬಗ್ಗೆ ಅವರೊಂದಿಗೆ ಚರ್ಚಿಸಿದ್ದು, ಆ ಸಂವಾದವನ್ನು ನಾನು ನೆನಪಿಟ್ಟುಕೊಳ್ಳುತ್ತೇನೆ. ಅವರ ನಿಧನದ ಸುದ್ದಿ ತಿಳಿದು ಬೇಸರವಾಯಿತು. ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ’ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಲೇಡಿ ಬ್ರಬೋರ್ನ್​​ ಕಾಲೇಜಿನಲ್ಲಿ ರಾಜ್ಯಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಇವರು, ಶಿಕ್ಷಣ ಕ್ಷೇತ್ರದಲ್ಲಿ ಮಹಾನ್ ಸಾಧನೆ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.