ನವದೆಹಲಿ: ದೇಶದಲ್ಲಿ ಜೂನ್ 30ರವರೆಗೆ ಲಾಕ್ಡೌನ್ ಮುಂದುವರಿಕೆಯಾಗಿದ್ದು, ಜೂನ್ 8ರಿಂದ ಶಾಪಿಂಗ್ ಮಾಲ್, ಹೋಟೆಲ್,ರೆಸ್ಟೋರೆಂಟ್ ಹಾಗೂ ದೇವಸ್ಥಾನ ಓಪನ್ ಆಗಲಿವೆ. ಹೀಗಾಗಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಕಂಟೈನ್ಮೆಂಟ್ ಪ್ರದೇಶ ಹೊರತುಪಡಿಸಿ ಉಳಿದೆಲ್ಲಡೆ ಧಾರ್ಮಿಕ ಸ್ಥಳಗಳು ಓಪನ್ ಆಗಲಿದ್ದು, ಮಂದಿರ, ಮಸೀದಿ ಹಾಗೂ ಚರ್ಚ್ಗಳು ತೆರೆದುಕೊಳ್ಳಲಿರುವ ಕಾರಣ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ಜೂನ್ 8ರಿಂದ ಶಾಪಿಂಗ್ ಮಾಲ್, ರೆಸ್ಟೋರೆಂಟ್ ಓಪನ್... ಹೊಸ ನಿಯಮ ಪ್ರಕಟಿಸಿದ ಕೇಂದ್ರ!
ಪ್ರಮುಖ ಮಾರ್ಗಸೂಚಿಗಳು ಇಂತಿವೆ
- ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ.
- 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದೊಳಗಿನ ಮಕ್ಕಳ ಪ್ರವೇಶ ನಿಷೇಧ
- ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕ
- ಫೇಸ್ ಕವರ್ ಮತ್ತು ಮಾಸ್ಕ್ ಧರಿಸುವುದು ಕಡ್ಡಾಯ
- ಸಾಮೂಹಿಕ ಪ್ರಾರ್ಥನೆ ಬಿಟ್ಟು ವೈಯಕ್ತಿಕ ಪೂಜೆಗಳಿಗೆ ಆದ್ಯತೆ
- ಪ್ರಾರ್ಥನಾ ಮಂದಿರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
- ಶೂ ಅಥವಾ ಪಾದರಕ್ಷೆ ಸ್ವಂತ ವಾಹನದೊಳಗೆ ಬಿಡುವುದು ಕಡ್ಡಾಯ
- ಧಾರ್ಮಿಕ ಕ್ಷೇತ್ರಗಳಲ್ಲಿ ಕೊರೊನಾ ಮುನ್ನೆಚ್ಚರಿಕೆಗಳ ಬಗ್ಗೆ ಭಿತ್ತಿ ಪತ್ರ ಪೋಸ್ಟರ್ ಪ್ರದರ್ಶನ
- ಧಾರ್ಮಿಕ ಕೇಂದ್ರದ ಆವರಣದೊಳಗಿನ ಅಂಗಡಿಗಳು, ಹೋಟೆಲ್, ಪಾರ್ಕಿಂಗ್ ಪ್ರದೇಶದಲ್ಲಿ ಅಂತರ ಕಾಯ್ದುಕೊಳ್ಳಬೇಕು