ಲುಧಿಯಾನ: ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ ಜನಿಸಿದ್ದ ಮಗುವನ್ನು ಮಹಿಳೆಯೊಬ್ಬರು ಅಪಹರಣ ಮಾಡಿರುವ ಘಟನೆ ನಡೆದಿದೆ.
ಅಪಹರಣಗೊಂಡಿರುವ ಮಗು ಫೆ.07 ರಂದು ಜನಿಸಿದ್ದು, ಮಹಿಳೆಯೊಬ್ಬರು ಮಗುವನ್ನು ಅಪಹರಣ ಮಾಡಿ ಪರಾರಿಯಾಗುತ್ತಿದ್ದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಇದರ ಆಧಾರದ ಮೇಲೆ ಆರೋಪಿ ಮಹಿಳೆಯನ್ನು ಪತ್ತೆ ಹಚ್ಚಲಾಗುವುದು. ಪ್ರಕರಣ ಸಂಬಂಧ ಈಗಾಗಲೇ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್‌ಐ ಜಸ್ಬೀರ್ ಕೌರ್ ಸುದ್ದಿಗಾರರಿಗೆ ತಿಳಿಸಿದರು.
ಇನ್ನು ಆಸ್ಪತ್ರೆಯ ವೈದ್ಯಾಧಿಕಾರಿ ಅವಿನಾಶ್ ಜಂದಲ್ ಮಾತನಾಡಿ, ಈ ಘಟನೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದ್ದು, ಎರಡು ದಿನಗಳ ಹಿಂದೆ ಜನಿಸಿದ್ದ ಮಗುವನ್ನು ಮಹಿಳೆಯೇ ಅಪಹರಣ ಮಾಡಿದ್ದಾರೆ ಎಂದು ತಿಳಿಸಿದರು.