ETV Bharat / bharat

ಕೊರೊನಾ ವಿಚಾರದಲ್ಲಿ ಮುಂದಿನ 3 ತಿಂಗಳು ನಿರ್ಣಾಯಕ: ಕೇಂದ್ರ ಸಚಿವ ಹರ್ಷವರ್ಧನ್​​​

author img

By

Published : Oct 23, 2020, 7:17 PM IST

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಮುಂದಿನ ಮೂರು ತಿಂಗಳು ಅತ್ಯಂತ ನಿರ್ಣಾಯಕ ಎಂದು ಕೇಂದ್ರ ಸಚಿವ ಡಾ.ಹರ್ಷವರ್ಧನ್ ಅಭಿಪ್ರಾಯಪಟ್ಟಿದ್ದಾರೆ.

harshvardhan
ಕೇಂದ್ರ ಸಚಿವ ಹರ್ಷವರ್ಧನ್​​​

ನವದೆಹಲಿ: ಕೊರೊನಾ ವಿಚಾರದಲ್ಲಿ ಮುಂದಿನ ಮೂರು ತಿಂಗಳು ಭಾರತಕ್ಕೆ ಅತ್ಯಂತ ನಿರ್ಣಾಯಕ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಮುಂಜಾಗ್ರತಾ ಕ್ರಮಗಳ ಬಗ್ಗೆ ಉತ್ತರ ಪ್ರದೇಶದ ಆರೋಗ್ಯ ಮತ್ತು ವೈದ್ಯಕೀಯ ಸಚಿವರು ಹಾಗೂ ಇತರ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಹರ್ಷವರ್ಧನ್ ನಾವು ಮುಂಬರುವ ಹಬ್ಬಗಳು ಹಾಗೂ ಚಳಿಗಾಲದಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕಿದೆ. ಇದನ್ನು ಅನುಸರಿಸಿದರೆ ನಾವು ಕೊರೊನಾ ವಿರುದ್ಧದ ಹೋರಾಟದಲ್ಲಿ ಉನ್ನತ ಸ್ಥಾನದಲ್ಲಿ ಇರುತ್ತೇವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಂತಹ ದೊಡ್ಡ ರಾಜ್ಯಗಳು ಕೊರೊನಾ ತಡೆಯಲು ಅತ್ಯಂತ ಸರಳವಾದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿಶೇಷವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​ ಧರಿಸುವುದು, ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದು ಅತಿ ಮುಖ್ಯ ಎಂದು ಹೇಳಿದರು.

ಒಂದು ದಿನದಲ್ಲಿ 95 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು, ಚೇತರಿಕೆ ದರವು ಶೇಕಡಾ 90ರ ಆಸುಪಾಸಿನಲ್ಲಿದೆ. ಸಾವಿನ ಪ್ರಮಾಣವೂ ಕೂಡಾ ಕಡಿಮೆಯಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಕೊರೊನಾ ಆರಂಭದಲ್ಲಿ ಕೇವಲ ಒಂದೇ ಒಂದು ಪ್ರಯೋಗಾಲಯ ಇತ್ತು. ಆದರೆ, ಈಗ ಪ್ರಯೋಗಾಲಯಗಳ ಸಂಖ್ಯೆ ಸುಮಾರು 2 ಸಾವಿರದಷ್ಟಿದೆ. ಈವರೆಗೆ 10 ಕೋಟಿ ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ಮಾಡಲಾಗಿದೆ. ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಂಡಿರುವುದನ್ನು ಇದು ಸೂಚಿಸುತ್ತದೆ ಎಂದು ಹರ್ಷವರ್ಧನ್ ಅಭಿಪ್ರಾಯಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.