ETV Bharat / bharat

ಹಥ್ರಾಸ್​ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂಕೋರ್ಟ್‌ಗೆ​ ಮೊರೆ - ಹಥ್ರಾಸ್​ ಅತ್ಯಾಚಾರ ಪ್ರಕರಣ

ದೇಶದಲ್ಲಿ ಹೆಚ್ಚು ಚರ್ಚೆಗೆ ಒಳಪಟ್ಟಿರುವ ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ನಡೆದ ದಲಿತ ಯುವತಿಯ ಮೇಲಿನ ಅತ್ಯಾಚಾರ ಹಾಗೂ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸರ್ಕಾರೇತರ ಸಂಸ್ಥೆಯೊಂದು (ಎನ್​ಜಿಒ) ಸುಪ್ರೀಂಕೋರ್ಟ್ ಮೊರೆ ಹೋಗಿದೆ.

Supreme Court
ಸುಪ್ರೀಂ ಕೋರ್ಟ್
author img

By

Published : Oct 8, 2020, 5:20 PM IST

ನವದೆಹಲಿ: ಉತ್ತರ ಪ್ರದೇಶದ ಹಥ್ರಾಸ್​ನಲ್ಲಿ ನಡೆದ ಯುವತಿಯ ಮೇಲೆ ಅತ್ಯಾಚಾರ ಹಾಗೂ ಸಾವು ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಕೋರಿ ಎನ್‌ಜಿಒವೊಂದು ಸುಪ್ರೀಂಕೋರ್ಟ್‌ ಮೊರೆ ಹೋಗಿದೆ.

ಈ ಕುರಿತು ಅರ್ಜಿ ಸಲ್ಲಿಸಿದ ಈ ಸಂಸ್ಥೆ, ಪ್ರಕರಣದ ನಿಷ್ಪಕ್ಷಪಾತ ತನಿಖೆಯ ವಿಚಾರವಾಗಿ ಸುಪ್ರೀಂಕೋರ್ಟ್‌ ಮಧ್ಯಪ್ರವೇಶ ಮಾಡಬೇಕು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಅರ್ಜಿ ವಿಚಾರಣೆ ಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು‌ ಎಂದು ಮನವಿ ಮಾಡಿದೆ.

ಈ ಘಟನೆಯಲ್ಲಿ ಅಧಿಕಾರಿಗಳು ಸಾಕ್ಷ್ಯಗಳನ್ನು ತಿರುಚುವ ಕೆಲಸ ಮಾಡುತ್ತಿದೆ. ಹಾಗಾಗಿ, ಶೀಘ್ರವೇ ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.