ನವದೆಹಲಿ: ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ ಮತ್ತು ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್ ಕಳುಹಿಸಿದ್ದು, ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ತನಿಖಾ ತಂಡವನ್ನ ತಕ್ಷಣವೇ ಸ್ಥಳಕ್ಕೆ ಕಳುಹಿಸಿ ಸತ್ಯ ಶೋಧನಾ ಕಾರ್ಯ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಸೂಚಿಸಿದೆ.