ಶ್ರೀನಗರ: ಪುಲ್ವಾಮಾ ಭಯೋತ್ಪಾದಕ ದಾಳಿ ಪ್ರಕರಣ ಸಂಬಂಧ ಮತ್ತಿಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ.
ದಾಳಿ ನಡೆದು ಒಂದು ವರ್ಷದ ಬಳಿಕ ಆತ್ಮಾಹುತಿ ಬಾಂಬರ್ ಆದಿಲ್ ಅಹ್ಮದ್ ದಾರ್‌ಗೆ ಆಶ್ರಯ ನೀಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಇದೀಗ ಈತನನ್ನು ಬಂಧಿಸಿದ ನಾಲ್ಕು ದಿನಗಳಲ್ಲೇ ಪ್ರಕರಣ ಸಂಬಂಧ ಇನ್ನೂ ಇಬ್ಬರನ್ನು ಎನ್ಐಎ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಆದರೆ ಯಾವ ಆರೋಪಕ್ಕೆ ತಂದೆ-ಮಗಳನ್ನು ಬಂಧಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿಲ್ಲ. ಮುಂದಿನ ದಿನಗಳಲ್ಲಿ ಪ್ರಕರಣ ಸಂಬಂಧ ಇನ್ನೂ ಕೆಲವರನ್ನು ಬಂಧಿಸಲಾಗುವುದು ಎಂದು ಮೂಲಗಳಿಂದ ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.