ನವದೆಹಲಿ: ಐಸಿಸ್ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ಆರೋಪದಡಿ 10 ಜನರನ್ನು ಇಂದು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ವಿಚಾರಣೆಗೊಳಪಡಿಸಿದೆ.
ಐಸಿಸ್ ಸಂಘಟನೆಯೊಂದಿಗೆ ಸೇರಿಕೊಂಡು ಭಾರತದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸಲು ಸಂಚು ರೂಪಿಸಿದ್ದ ಖಾಜಾ ಮೊಹಿದ್ದೀನ್ ಮತ್ತವರ ಸಹಚರರನ್ನು ಎನ್ಐಎ ವಿಚಾರಣೆ ನಡೆಸಿದೆ. ಈ ಆರೋಪಿಗಳು ನಕಲಿ ದಾಖಲಾತಿಗಳ ಮೇಲೆ ಸಿಮ್ ಕಾರ್ಡ್‌ಗಳನ್ನು ಪಡೆದು ಕುಕೃತ್ಯಕ್ಕೆ ಯೋಜನೆ ರೂಪಿಸುತ್ತಿದ್ದರು ಎಂದು ಎನ್ಐಎ ತಿಳಿಸಿದೆ.
ಪ್ರಕರಣದ ಕೂಲಂಕಶ ತನಿಖೆಗಾಗಿ ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ ಆರು ದಿನಗಳ ಕಾಲ ಆರೋಪಿಗಳನ್ನು ಬಂಧನದಲ್ಲಿರಿಸಲಾಗಿದೆ.