ಮುಂಬೈ: ಕೊರೊನಾ ವೈರಸ್ಗೆ ತುಂಬು ಗರ್ಭಿಣಿಯನ್ನು ಬಲಿ ಪಡೆದಿರುವ ಘಟನೆ ಇಲ್ಲಿನ ನಲ್ಲಸೋಪಾರ ನಗರದಲ್ಲಿ ನಡೆದಿದೆ.
ಶನಿವಾರ ರಾತ್ರಿ ತುಂಬು ಗರ್ಭಿಣಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಬಿವೈಎಲ್ ನಾಯರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊರೊನಾ ಸಂಬಂಧಿ ರೋಗದಿಂದ ಬಳಲುತ್ತಿದ್ದ ಆಕೆಯ ರಕ್ತದ ಮಾದರಿಯನ್ನು ಪರೀಕ್ಷಿಸಿ ಐಸೋಲೆಷನ್ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ ತೀವ್ರ ಉಸಿರಾಟದ ಸಮಸ್ಯೆಯಿಂದ ತುಂಬು ಗರ್ಭಿಣಿ ಸಾವನ್ನಪ್ಪಿದ್ದಾರೆ. ಆಕೆಯ ಹೊಟ್ಟೆಯಲ್ಲಿರುವ ಮಗು ಸಹ ಮೃತಪಟ್ಟಿದೆ ಎಂದು ವೈದ್ಯರು ಘೋಷಿಸಿದ್ದಾರೆ.
ಮೃತ ಗರ್ಭಿಣಿ ಕೊರೊನಾ ವೈರಸ್ನಿಂದ ಬಳಲುತ್ತಿದ್ದರು ಎಂಬುದು ದೃಢವಾಗಿದೆ. ನಾಯರ್ ಆಸ್ಪತ್ರೆಗೆ ಸೇರಿಸಿಕೊಳ್ಳವ ಮುನ್ನ ಎರಡು ಆಸ್ಪತ್ರೆಗಳು ಗರ್ಭಿಣಿಯನ್ನು ಸೇರಿಸಿಕೊಳ್ಳಲು ನಿರಾಕರಿಸಿದ್ದವು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.