ನವದೆಹಲಿ : 2012 ರಲ್ಲಿ ದೇಶವನ್ನೇ ಬೆಚ್ಚಿಬೀಳಿಸಿದ ನಿರ್ಭಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿ ಮುಖೇಶ್ ಕುಮಾರ್ ಸೇರಿದಂತೆ ನಾಲ್ವರಿಗೆ ಸುಪ್ರೀಂಕೋರ್ಟ್ ಮರಣ ದಂಡನೆ ವಿಧಿಸಿದೆ. ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಅತ್ಯಾಚಾರಿಗಳನ್ನು ಗಲ್ಲಿಗೆ ಹಾಕುವಂತೆ ದೆಹಲಿ ನ್ಯಾಯಾಲಯ ಡೆತ್ ವಾರಂಟ್ ಜಾರಿಗೊಳಿಸಿದೆ. ಈ ಬೆನ್ನಲ್ಲೇ ಆರೋಪಿಗಳಾದ ಮುಖೇಶ್ ಕುಮಾರ್ ಮತ್ತು ವಿನಯ್ ಶರ್ಮಾ ಈಗಾಗಲೇ ಕ್ಯೂರೇಟಿವ್ (ಪರಿಹಾರಾತ್ಮಕ) ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇದೇ 14 ರಂದು ನಡೆಯಲಿದೆ.
ನಿರ್ಭಯಾ ಅತ್ಯಾಚಾರಿಗಳಿಗೆ ಜನವರಿ 22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲು: ದೆಹಲಿ ಕೋರ್ಟ್ ಆದೇಶ
ಆರೋಪಿಗಳಾದ ಮುಖೇಶ್ ಕುಮಾರ್ ಮತ್ತು ವಿನಯ್ ಶರ್ಮಾ ಸಲ್ಲಿಸಿದ ಕ್ಯೂರೇಟಿವ್ ಅರ್ಜಿಯನ್ನು ವಿಚಾರಣೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ಅರ್ಜಿ ವಿಚಾರಣೆಗಾಗಿ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವನ್ನು ರಚನೆ ಮಾಡಿದೆ. ನ್ಯಾ.ಎನ್.ವಿ.ರಮಣ್, ನ್ಯಾ.ಅರುಣ್ ಮಿಶ್ರಾ, ನ್ಯಾ.ಆರ್.ಎಫ್.ನಾರಿಮನ್, ನ್ಯಾ.ಆರ್.ಬಾನುಮತಿ ಹಾಗೂ ನ್ಯಾ.ಅಶೋಕ್ ಭೂಷಣ್ ಒಳಗೊಂಡ ಪೀಠವನ್ನು ರಚಿಸಿದೆ.
ಇದೇ ಜನವರಿ 14 ರಂದು ಕ್ಯೂರೇಟಿವ್ (ಪರಿಹಾರಾತ್ಮಕ) ಅರ್ಜಿ ವಿಚಾರಣೆ ನಡೆಸಲಿದೆ.