ನವದೆಹಲಿ: ದೆಹಲಿ ಪೊಲೀಸರು ಸೂಚಿಸಿದಂತೆ ಜನವರಿ 5ರ ಹಿಂಸಾಚಾರದಲ್ಲಿ ಜೆಎನ್‌ಯು ವಿದ್ಯಾರ್ಥಿಗಳು ಭಾಗಿಯಾಗಿರುವುದರ ಬಗ್ಗೆ ತಮಗೆ ಬೇಸರವಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರು ಅಸಮಾಧಾನ ವ್ಯಕ್ತಪಡಿಸಿದರು.
ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮ ಶೈಕ್ಷಣಿಕ ವಾತಾವರಣ ನೀಡಲು ನಾವು ಬದ್ಧವಾಗಿದ್ದೇವೆ. ಕ್ಯಾಂಪಸ್‌ನಲ್ಲಿ ಯಾವುದೇ ಹಿಂಸಾಚಾರ ಮತ್ತು ಅರಾಜಕತೆಯನ್ನು ಮಾನವ ಸಂಪನ್ಮೂಲ ಸಚಿವಾಲಯ ಸಹಿಸುವುದಿಲ್ಲ ಎಂದರು.
ದೆಹಲಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಸೂಚಿಸಿದಂತೆ ಜೆಎನ್‌ಯು ವಿದ್ಯಾರ್ಥಿಗಳನ್ನು ಹಿಂಸಾಚಾರದಲ್ಲಿ ಅತಿಯಾಗಿ ತೊಡಗಿಸಿಕೊಂಡಿದ್ದಾರೆ. ಇದು ದುರದೃಷ್ಟಕರ ಎಂದು ನಿಶಾಂಕ್ ಸರಣಿ ಟ್ವೀಟ್ ಮಾಡಿದ್ದಾರೆ.
ಶೈಕ್ಷಣಿಕ ಚಟುವಟಿಕೆಗಳ ಸುಗಮ ನಡೆಯಲು ವಿದ್ಯಾರ್ಥಿಗಳು ಸಹಕರಿಸಬೇಕು. ತಮ್ಮ- ತಮ್ಮ ವಿಶ್ವವಿದ್ಯಾಲಯಗಳಲ್ಲಿ "ಘನತೆಯ" ವಾತಾವರಣವನ್ನು ಕಾಪಾಡಿಕೊಳ್ಳಬೇಕೆಂದು ಸಚಿವರು ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.