ಪಾಟ್ನಾ : ಸತತ ನಾಲ್ಕನೇ ಬಾರಿ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು. ವಿಶೇಷ ಎಂದರೆ ನಾಲ್ಕನೇ ಅವಧಿಯಲ್ಲಿ ನಿತೀಶ್ ಕುಮಾರ್ 7ನೇ ಬಾರಿಗೆ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಪ್ರಮಾಣ ವಚನ ಭೋದಿಸಿದರು. ನಿತೀಶ್ ಕುಮಾರ್ ಜೊತೆ, ಬಿಜೆಪಿ ನಾಯಕರಾದ ತಾರ್ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಉಪಮುಖ್ಯಮಂತ್ರಿಗಳಾಗಿ ಅಧಿಕಾರ ಸ್ವೀಕರಿಸಿದರು.
ಜೆಡಿಯು ನಾಯಕಾರದ ವಿಜಯ್ ಕುಮಾರ್ ಚೌದರಿ, ವಿಜೇಂದ್ರ ಪ್ರಸಾದ್ ಯಾದವ್, ಅಶೋಕ್ ಚೌದರಿ ಮತ್ತು ಮಿವಾ ಲಾಲ್ ಚೌದರಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಪಡೆದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಂಡಿದ್ದಾರೆ.