ಬೆತಿಯಾ (ಬಿಹಾರ): ಸಮರ್ಪಕ ಮೂಲಸೌಕರ್ಯಗಳ ಕೊರತೆಯಿಂದಾಗಿ, ಬಿಹಾರದ ಬೆತಿಯಾ ಜಿಲ್ಲೆಯ ರಾಮ್ ಲಖನ್ ಸಿಂಗ್ ಯಾದವ್ ಕಾಲೇಜಿನ ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತುಕೊಂಡು ಪರೀಕ್ಷೆ ಬರೆದಿದ್ದಾರೆ.
ಸಾಕಷ್ಟು ಬೆಂಚು, ಮೇಜುಗಳ ಕೊರತೆ ಮತ್ತು ಕಾಲೇಜಿನಲ್ಲಿ ಸ್ಥಳಾವಕಾಶದ ಕೊರತೆಯಿಂದಾಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಾಧ್ಯವಾಗದೇ ಸಾಕಷ್ಟು ಹೈರಾಣಾಗಿದ್ದಾರೆ. ಕಾಲೇಜಿನ ಬಯಲಿನಲ್ಲಿಯೇ ಕುಳಿತು ಪರೀಕ್ಷೆ ಬರೆದಿದ್ದಾರೆ.
ಈ ಬಗ್ಗೆ ಈಟಿವಿ ಭಾರತ್ ಅವರೊಂದಿಗೆ ಮಾತನಾಡಿದ ಕೇಂದ್ರ ಅಧೀಕ್ಷಕ ಡಾ.ರಾಜೇಶ್ವರ ಪ್ರಸಾದ್ ಯಾದವ್, ಎಲ್ಲಾ ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಕಲ್ಪಿಸಲು ಕಾಲೇಜಿನಲ್ಲಿ ಕೊಠಡಿಗಳ ಕೊರತೆ ಇದೆ. ಮೂಲಸೌಕರ್ಯಗಳ ಕೊರತೆಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಡುವ ಶಾಲಾ ಅಧಿಕಾರಿಗಳು ಮೇಲ್ ಕಳುಹಿಸಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದಿದ್ದಾರೆ.