ನವದೆಹಲಿ: ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) ಪೆಟ್ರೋಲ್ ಮತ್ತು ಡೀಸೆಲ್ಗಳ ಮೇಲಿನ ಮೂಲ ಮಾರಾಟ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ಇಂಡಿಯನ್ ಆಯಿಲ್ ಪ್ರಕಟಿಸಿದೆ.
ಕೋವಿಡ್ -19 ನಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಗಣಿಸಿ, ಒಎಂಸಿಗಳು ಏಪ್ರಿಲ್ 1, 2020 ರಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಬದಲಾಗದಂತೆ ಇರಿಸಿಕೊಂಡಿವೆ. ದೇಶಾದ್ಯಂತ ಇದನ್ನು ಸ್ಥಿರವಾಗಿ ನಿರ್ವಹಿಸಲಾಗುತ್ತದೆ ಎಂದು ಐಒಸಿ ವಕ್ತಾರರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ವಲಯದ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ - 2020 ರ ಏಪ್ರಿಲ್ 1 ರಿಂದ ಜಾರಿಗೆ ಬರಬೇಕಿದ್ದ ಬಿಎಸ್-VI ವ್ಯವಸ್ಥೆಗೆ ಸಜ್ಜಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ವಕ್ತಾರರು ತಿಳಿಸಿದ್ದಾರೆ. ಆದರೆ ಕರೋನಾ ಹಿನ್ನೆಲೆಯಲ್ಲಿ ಬಿಎಸ್ -IV ಗೆ ಇದೇ ತಿಂಗಳ 30 ವರೆಗೂ ಅವಕಾಶ ನೀಡಲಾಗಿದೆ ಎಂಬುದನ್ನು ಗಮನಿಸಬೇಕಾಗಿದೆ,
ಏಪ್ರಿಲ್ 1 ರಿಂದ ಜಾರಿಗೆ ಬರುವಂತೆ ಮಹಾರಾಷ್ಟ್ರ, ಕರ್ನಾಟಕ, ಪಶ್ಚಿಮ ಬಂಗಾಳ ಮುಂತಾದ ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನ ಚಿಲ್ಲರೆ ಮಾರಾಟದ ಬೆಲೆಗಳ (ಆರ್‌ಎಸ್‌ಪಿ)ನ್ನು ಆಯಾ ರಾಜ್ಯದ ವ್ಯಾಟ್ ದರಕ್ಕೆ ಅನುಗುಣವಾಗಿ ಹೆಚ್ಚಿಸಲಾಗಿದೆ.