ETV Bharat / bharat

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಆರೋಗ್ಯದಲ್ಲಿ ಯಥಾಸ್ಥಿತಿ: ಆಸ್ಪತ್ರೆ ಸ್ಪಷ್ಟನೆ - ಸೇನಾ ಸಂಶೋಧನಾ ಮತ್ತು ರೆಫೆರಲ್​ ಆಸ್ಪತ್ರೆ

ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಆಸ್ಪತ್ರೆ ತನ್ನ ವೈದ್ಯಕೀಯ ವರದಿಯಲ್ಲಿ ಸ್ಪಷ್ಟನೆ ನೀಡಿದೆ.

former President Pranab Mukherjee
ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ
author img

By

Published : Aug 18, 2020, 1:51 PM IST

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ನವದೆಹಲಿಯ ಸೇನಾ ಸಂಶೋಧನಾ ಮತ್ತು ರೆಫೆರಲ್​ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ.

ಪ್ರಣಬ್ ಮುಖರ್ಜಿ ಅವರನ್ನು ಆ.10ರಂದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿನಲ್ಲಿ ಹೆಪ್ಪುಗಟ್ಟಿದ ರಕ್ತವನ್ನು ತೆಗೆದುಹಾಕಲು ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸದ್ಯಕ್ಕೆ 84 ವರ್ಷದ ಪ್ರಣಬ್ ಮುಖರ್ಜಿ​ ಕೋಮಾ ಸ್ಥಿತಿಯಲ್ಲಿದ್ದು, ಅಂದಿನಿಂದಲೂ ಇದೇ ಸ್ಥಿತಿಯಲ್ಲಿ ಮುಂದುವರೆದಿದ್ದಾರೆ. ಜೊತೆಗೆ ಇವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಸದ್ಯಕ್ಕೆ ವೆಂಟಿಲೇಟರ್ ಮೂಲಕ ಆಮ್ಲಜನಕ ಪೂರೈಕೆ ಮಾಡಲಾಗುತ್ತಿದ್ದು, ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ಆಸ್ಪತ್ರೆ ತನ್ನ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.