ನವದೆಹಲಿ : ಬಿಹಾರ ಚುನಾವಣೆಯಲ್ಲಿ ಕಳಪೆ ಪ್ರದರ್ಶನ, ಕೆಲ ಕಾಂಗ್ರೆಸ್ ನಾಯಕರಿಂದ ಪಕ್ಷದ ನಾಯಕತ್ವದ ಬಗ್ಗೆ ಟೀಕೆಗಳ ನಡುವೆ, ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ಪಕ್ಷದಲ್ಲಿ ಯಾವುದೇ ನಾಯಕತ್ವ ಬಿಕ್ಕಟ್ಟು ಇಲ್ಲ. ಸೋನಿಯಾ ಮತ್ತು ರಾಹುಲ್ ಗಾಂಧಿಗೆ ಎಲ್ಲರೂ ಬೆಂಬಲ ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಗಾಂಧಿ ಕುಟುಂಬಕ್ಕೆ ಆಪ್ತರಾಗಿರುವ ನಾಯಕರಲ್ಲಿ ಒಬ್ಬರಾಗಿರುವ ಖುರ್ಷಿದ್, ಕಾಂಗ್ರೆಸ್‌ನಲ್ಲಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲು ಸಾಕಷ್ಟು ಅವಕಾಶಗಳಿವೆ. ಆದರೆ, ನಾಯಕರು ಪಕ್ಷದ ಹೊರಗೆ ಅಸಮಾಧಾನ ವ್ಯಕ್ತಪಡಿಸುವುದು ನೋವುಂಟು ಮಾಡುತ್ತದೆ ಎಂದು ಹೇಳಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಮತ್ತು ಇತರರು ಪಕ್ಷದ ನಾಯುಕತ್ವದ ಬಗ್ಗೆ ಸಾರ್ವಜನಿಕವಾಗಿ ಹೇಳಿಕೆ ನೀಡಿದ ಬಳಿಕ ಖರ್ಷಿದ್ ಈ ರೀತಿ ಹೇಳಿದ್ದಾರೆ.
ಪಕ್ಷದ ನಾಯಕರು ನಮ್ಮ ಅಭಿಪ್ರಾಯ ಕೇಳುತ್ತಾರೆ, ನನಗೂ ಅವಕಾಶ ನೀಡಿದ್ದಾರೆ. ಆದ್ದರಿಂದ ಅವರು, ( ಮಾಧ್ಯಮಗಳಲ್ಲಿ ಟೀಕಿಸುವವರು) ನಾಯಕರು ಅಭಿಪ್ರಾಯ ಕೇಳುತ್ತಿಲ್ಲ ಎಂದು ಹೇಗೆ ಹೇಳುತ್ತಾರೆ ಎಂದು ಖುರ್ಷಿದ್ ಪ್ರಶ್ನಿಸಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ಮತ್ತು ಇತ್ತೀಚಿನ ಉಪಚುನಾವಣೆಗಳ ಬಗ್ಗೆ ಹಿರಿಯ ನಾಯಕಾರದ ಕಪಿಲ್ ಸಿಬಲ್ ಮತ್ತು ಪಿ.ಚಿದಂಬರಂ ಅವರ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಖುರ್ಷಿದ್, ಅವರ ಹೇಳಿಕೆಗಳನ್ನು ಒಪ್ಪಲು ಸಾಧ್ಯವಿಲ್ಲ. ಯಾರಾದರು ಹೊರಗೆ ಹೋಗಿ, ಮಾಧ್ಯಮಗಳ ಎದುರು ಯಾಕೆ ಹೇಳಿಕೆ ಕೊಡಬೇಕು ಎಂದಿದ್ದಾರೆ.