ನವದೆಹಲಿ : ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು ಕಡಿತಗೊಳಿಸುವ ಯಾವುದೇ ಯೋಚನೆಗಳಿಲ್ಲ ಎಂದು ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಕೇಂದ್ರ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 50 ವರ್ಷಕ್ಕೆ ಇಳಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂಬ ವರದಿಯನ್ನು ತಳ್ಳಿ ಹಾಕಿರುವ ಅವರು, ಅಂತಹ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಮತ್ತು ಆ ಬಗ್ಗೆ ಚರ್ಚಿ ನಡೆಸಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ಕೆಲ ದಿನಗಳಿಂದ ಮಾಧ್ಯಮಗಳಲ್ಲಿ ಈ ಬಗ್ಗೆ ತಪ್ಪು ಮಾಹಿತಿಯನ್ನು ನೀಡಲಾಗುತ್ತಿದೆ ಮತ್ತು ಸರ್ಕಾರಿ ಮೂಲಗಳಿಂದ ಈ ಮಾಹಿತಿ ನೀಡಲಾಗಿದೆ ಎಂದು ಹೇಳಲಾಗ್ತಿದೆ ಎಂದು ಸಿಂಗ್ ಹೇಳಿದ್ದಾರೆ.
ಕೊರೊನಾ ವೈರಸ್ ಬಿಕ್ಕಟ್ಟಿನಲ್ಲಿ ದೇಶ ಸಾಗುತ್ತಿರಬೇಕಾದರೆ ಕೆಲ ಪಟ್ಟಭದ್ರ ಹಿತಾಸಕ್ತಿಗಳು ಈ ತರದ ಸುದ್ದಿಗಳನ್ನು ಹಬ್ಬಿಸುವ ಮೂಲಕ ಸರ್ಕಾರದ ಒಳ್ಳೆಯ ಕೆಲಸಗಳನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.