ನವದೆಹಲಿ: ಕೃಷಿ ಮಸೂದೆ ವಿರೋಧಿಸಿ ನಡೆಯುತ್ತಿರುವ ದೆಹಲಿ ಚಲೋ ಆಂದೋಲನಕ್ಕೆ ಭಾರತವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಬಲ ದೊರಕಿದೆ. ಆದರೆ ಈ ನಡುವೆ ರೈತ ಸಂಘಟನೆಯ ಮುಖಂಡರು ದೇಶದ ರೈತರ ಹೋರಾಟ ಆಂತರಿಕ ವಿಚಾರವಾಗಿದೆ. ದೇಶದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಲು ಹೊರಗಿನ ಯಾವುದೇ ವ್ಯಕ್ತಿಗೆ ಅವಕಾಶವಿಲ್ಲ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ.
ದೆಹಲಿ-ಮಧ್ಯಪ್ರದೇಶದ ಸಿಂಘು ಗಡಿ ಭಾಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಶಿವ ಕುಮಾರ್ ಕಾಕಜ್ಜಿ, ಸರ್ಕಾರ ಜಾರಿ ಮಾಡಿದ ಮೂರು ಕೃಷಿ ಮಸೂದೆಗಳನ್ನು ಹಿಂಪಡೆಯುವರೆಗೂ ಪ್ರತಿಭಟನೆ ಮುಂದುವರಿಯಲಿದೆ ಎಂದಿದ್ದಾರೆ.
ಅಲ್ಲದೆ ಕೆನಡಾ ಪ್ರಧಾನಿ ಬೆಂಬಲ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಭಾರತದ ಆಂತರಿಕ ವಿಚಾರದಲ್ಲಿ ಹೊರಗಿನ ಯಾವುದೇ ವ್ಯಕ್ತಿಯ ಹಸ್ತಕ್ಷೇಪಕ್ಕೆ ಅವಕಾಶವಿಲ್ಲ. ಆದರೆ ನಮ್ಮ ಸಮಸ್ಯೆಗಳ ಕುರಿತು ಅವರಿಗಿರುವ ಕಾಳಜಿಯನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರೈತ ಪ್ರತಿಭಟನೆಗೆ ಕೆನಡಾ ಪ್ರಧಾನಿಯಿಂದ ಬೆಂಬಲ: ಶಿವಸೇನೆ ಸಂಸದೆ ಗರಂ..!