ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದರೂ ಮತ್ತೊಂದು ಲಾಕ್ಡೌನ್ ಮಾಡುವ ಯೋಜನೆ ಇಲ್ಲ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.
ದೆಹಲಿಯಲ್ಲಿ ಮತ್ತೊಂದು ಲಾಕ್ಡೌನ್ ಘೋಷಣೆ ಮಾಡಲಾಗುತ್ತದೆ ಎಂದು ಅನೇಕ ಜನರು ಊಹಿಸುತ್ತಿದ್ದಾರೆ. ಅಂತಹ ಯಾವುದೇ ಯೋಜನೆಗಳಿಲ್ಲ ಎಂದು ಕೇಜ್ರಿವಾಲ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
-
Many people are speculating whether another lockdown in Delhi in being planned. There are no such plans.
— Arvind Kejriwal (@ArvindKejriwal) June 15, 2020 " class="align-text-top noRightClick twitterSection" data="
">Many people are speculating whether another lockdown in Delhi in being planned. There are no such plans.
— Arvind Kejriwal (@ArvindKejriwal) June 15, 2020Many people are speculating whether another lockdown in Delhi in being planned. There are no such plans.
— Arvind Kejriwal (@ArvindKejriwal) June 15, 2020
ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಂತ್ರಿ ಅರವಿಂದ ಕೇಜ್ರಿವಾಲ್, ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಮೂವರು ಮೇಯರ್‌ಗಳೊಂದಿಗೆ ಸಭೆ ನಡೆಸಿ ಕೋವಿಡ್-19 ಪರಿಸ್ಥಿತಿಯನ್ನು ಎದುರಿಸುವ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು.
ರಾಷ್ಟ್ರ ರಾಜಧಾನಿಯಲ್ಲಿ ಈವರೆಗೆ 41 ಸಾವಿರಕ್ಕಿಂತಲೂ ಅಧಿಕ ಕೊರೊನಾ ಪ್ರಕರಣ ಪತ್ತೆಯಾಗಿವೆ. 1,327 ಜನ ಮಾರಕ ಸೋಂಕಿಗೆ ಬಲಿಯಾಗಿದ್ದಾರೆ.