ETV Bharat / bharat

ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿರ್ಧರಿಸಿಲ್ಲ: ಹೈಕೋರ್ಟ್‌ಗೆ ಇಸಿ ಮಾಹಿತಿ

ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅಲ್ಲಿನ ಹೈಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ ನೀಡಿದೆ.

no-programme-fixed-for-local-body-elections-kerala-ec-tells-hc
ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ನಿರ್ಧರಿಸಿಲ್ಲ ; ಹೈಕೋರ್ಟ್‌ಗೆ ಇಸಿ ಮಾಹಿತಿ
author img

By

Published : Sep 8, 2020, 8:14 PM IST

ಕೊಚ್ಚಿ (ಕೇರಳ): ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇರಳ ಹೈಕೋರ್ಟ್‌ಗೆ ಅಲ್ಲಿನ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಕೇರಳದಲ್ಲಿನ ಪರಿಸ್ಥಿತಿಯನ್ನು ಅಲೋಕಿಸಿ ಎಲ್ಲಾ ಜಿಲ್ಲಾಡಳಿತಗಳಿಂದ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಅವಲೋಕನ ಮಾಡಲಾಗುತ್ತದೆ. ನಂತರ ಹೇಗೆ ಮತ್ತು ಯಾವಾಗ ಚುನಾವಣೆ ನಡೆಸಬೇಕು ಎಂಬುದರ ಬಗ್ಗೆ ನ್ಯಾಯಾಲಯಕ್ಕೆ ರಾಜ್ಯ ಚುನಾವಣಾಧಿಕಾರಿ ಮುರಳಿ ಪುರುಷೋತ್ತಮನ್ ಮಾಹಿತಿ ಸಲ್ಲಿಸಿದ್ದಾರೆ.

ಮಹಾಮಾರಿ ಕೊರೊನಾ ವೈರಸ್‌ನಿಂದಾಗಿ ಚುನಾವಣೆಯನ್ನು ಮುಂದೂಡಿರುವುದನ್ನ ಪ್ರಶ್ನಿಸಿ ಮಲಪುರಂನ ಮೊಹಮ್ಮದ್‌ ರಫಿ ಎಂಬುವವರು ಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆಯನ್ನು ನ್ಯಾಯಾಲಯ ಇಂದು ನಡೆಸಿತು.

ರಾಜ್ಯಾದ್ಯಂತ ಚುನಾವಣೆಯ ಉಪಕರಣಗಳು ಸಿದ್ಧತೆ ಮಾಡಿಕೊಳ್ಳಬೇಕಿದೆ. ಗ್ರಾಮ ಪಂಚಾಯಿತಿ ಹಾಗೂ ಮಟ್ಟನೂರು ಪುರಸಭೆ ಹೊರತುಪಡಿಸಿ ಎಲ್ಲಾ ಕಡೆ 2020ರ ನವೆಂಬರ್ 11ಕ್ಕೆ ಅಧಿಕಾರದ ಅವಧಿ ಮುಗಿಯಲಿದೆ. ಅಷ್ಟರೊಳಗೆ ಕೇರಳದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.