ಅಯೋಧ್ಯೆ: ದೇಶದಲ್ಲಿ ಕೊರೊನಾ ವೈರಸ್ ಸಮಸ್ಯೆ ಪರಿಹಾರಗೊಂಡು, ದೇಶ ಮರಳಿ ಸಾಮಾನ್ಯ ಸ್ಥಿತಿಗೆ ಮರುಳುವವರೆಗೆ ರಾಮಜನ್ಮಭೂಮಿಯಲ್ಲಿ ದೇವಾಲಯ ನಿರ್ಮಾಣ ಕಾರ್ಯ ಪ್ರಾರಂಭವಾಗುವುದಿಲ್ಲ ಎಂದು ಶ್ರೀ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಕೊರೊನಾ ವೈರಸ್ ಸೋಂಕು ವಿಶ್ವದಲ್ಲಿ ಲಕ್ಷಾಂತರ ಜೀವಗಳನ್ನು ಬಲಿ ತೆಗೆದುಕೊಂಡಿದೆ. ರಾಷ್ಟ್ರದ್ಯಂತ ಸೋಂಕು ಹರಡಿದ್ದು, ಇಡೀ ಜಗತ್ತೇ ಅಸ್ತವ್ಯಸ್ತಗೊಳಿಸಿದೆ. ಹೀಗಾಗಿ ದೇವಾಲಯ ನಿರ್ಮಾಣ ಕಾರ್ಯ ಮುಂದೂಡುವ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಟ್ರಸ್ಟ್ ಹೇಳಿದೆ.
"ದೇಶ ಮತ್ತು ಸಮಾಜಕ್ಕೆ ನಾವು ಮೊದಲ ಪ್ರಾಶಸ್ತ್ಯ ನೀಡುತ್ತೇವೆ. ಎಲ್ಲವೂ ಸಾಮಾನ್ಯ ಸ್ಥತಿಗೆ ಬರುವ ತನಕ ಯಾವುದೇ ಕೆಲಸವನ್ನು ಪ್ರಾರಂಭಿಸಲಾಗುವುದಿಲ್ಲ" ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ವಿಡಿಯೊ ಸಂದೇಶದ ಮೂಲಕ ತಿಳಿಸಿದ್ದಾರೆ.