ನವದೆಹಲಿ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಸಲು ಇದು ಸರಿಯಾದ ಸಮಯ ಅಲ್ಲ ಎಂದು ಕೇಂದ್ರ ಚುನಾವಣಾ ಆಯೋಗ ಅಭಿಪ್ರಾಯಪಟ್ಟಿದೆ.
ಲೋಕಸಭಾ ಚುನಾವಣೆಯೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ನಡೆಯಬಹುದು ಎಂದು ಎಲ್ಲರೂ ಭಾವಿಸಿದ್ದರು. ಆದ್ರೆ ಪುಲ್ವಾಮಾ ದಾಳಿಯ ನಂತರ ಪರಿಸ್ಥಿತಿ ಉತ್ತಮವಾಗಿಲ್ಲ ಹಾಗಾಗಿ ವಿಧಾನಸಭೆ ಚುನಾವಣೆ ನಡೆಸಲು ಇದು ಸೂಕ್ತ ಸಮಯವಲ್ಲ ಎಂದು ಆಯೋಗ ನಿರ್ಧರಿಸಿದೆ. ಇನ್ನು 6 ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನ 5 ಹಂತಗಳಲ್ಲಿ ನಡೆಸಲಾಗುವುದು ಅಂತ ಆಯೋಗ ಘೋಷಣೆ ಮಾಡಿದೆ.
ಸದ್ಯ ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲರ ಆಳ್ವಿಕೆಯಲ್ಲಿದೆ. ಮೆಹಬೂಬಾ ಮುಫ್ತಿಗೆ ಬಿಜೆಪಿ ನೀಡಿದ್ದ ಬೆಂಬಲವನ್ನ ವಾಪಾಸ್ ಪಡೆದಿದ್ದು, ಯಾವಪಕ್ಷಕ್ಕೂ ಬಹುಮತ ಇಲ್ಲವಾದ್ದರಿಂದ ರಾಜ್ಯಪಾಲರ ಆಳ್ವಿಕೆ ಹೇರಲಾಗಿದೆ.