ETV Bharat / bharat

ಲಾಕ್​ ಡೌನ್​ ಅವಧಿ ವಿಸ್ತರಣೆ ಇಲ್ಲ... ಮಾಧ್ಯಮಗಳ ವರದಿಗೆ ಸ್ಪಷ್ಟನೆ ನೀಡಿದ ರಾಜೀವ್​ ಗೌಬಾ - Rajiv Gauba

ಲಾಕ್​ಡೌನ್​ ವಿಸ್ತರಣೆಯಾಗುವ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿರುವ ಕುರಿತು ಸ್ಪಷ್ಟನೆ ನೀಡಿರುವ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜಿವ್​ ಗೌಬಾ, ಲಾಕ್​ ಡೌನ್​ ಅವಧಿಯನ್ನು ವಿಸ್ತರಿಸುವ ಕುರಿತು ಸದ್ಯಕ್ಕೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

Rajiv Gauba
ರಾಜಿವ್​ ಗೌಬಾ
author img

By

Published : Mar 30, 2020, 9:58 AM IST

ನವದೆಹಲಿ: ಸದ್ಯ ದೇಶದಲ್ಲಿ ಹೇರಿರುವ ಲಾಕ್​ ಡೌನ್​ ಅವಧಿಯನ್ನು ವಿಸ್ತರಿಸುವ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಪುಟ ಕಾರ್ಯದರ್ಶಿ ರಾಜಿವ್​ ಗೌಬಾ ಸ್ಪಷ್ಟನೆ ನೀಡಿದ್ದಾರೆ.

ಲಾಕ್​ಡೌನ್​ ವಿಸ್ತರಣೆಯಾಗುವ ಕುರಿತು ಮಾಧ್ಯಮಗಳಲ್ಲಿ ಬಿತ್ತರವಾಗಿರುವ ಸುದ್ದಿಗಳನ್ನು ಕೇಳಿ ನನಗೆ ಆಶ್ಚರ್ಯವಾಗಿದೆ. ಆದರೆ ಅಂತಹ ಯಾವುದೇ ಯೋಜನೆ ಸದ್ಯ ಸರ್ಕಾರಕ್ಕಿಲ್ಲ ಎಂದು ಗೌಬಾ ತಿಳಿಸಿದ್ದಾರೆ.

ಸದ್ಯ ದೇಶದಲ್ಲಿ 21 ದಿನಗಳ ಲಾಕ್​ಡೌನ್​ ಹೇರಲಾಗಿದೆ. ಈ ಅವಧಿ ಏಪ್ರಿಲ್​ 14ಕ್ಕೆ ಮುಕ್ತಾಯಗೊಳ್ಳಲಿದ್ದು, ಪರಿಸ್ಥಿತಿಯ ನಿಯಂತ್ರಣವನ್ನು ಅವಲೋಕಿಸಿ ಕೇಂದ್ರ ಸರ್ಕಾರ ಮತ್ತು ಆಯಾ ರಾಜ್ಯ ಸರ್ಕಾರಗಳು ಮುಂದಿನ ನಿರ್ಧಾರ ಕೈಗೊಳ್ಳಲಿವೆ ಎಂದು ಹೇಳಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.